ಶಿರಸಿ: ಮುಂಬರುವ ಲೋಕಸಭಾ ಚುನಾವಣೆಗೆ ಬೂತ್ ಮಟ್ಟದ ಏಜೆಂಟರಾಗಿ ನೇಮಕಾತಿ ಪ್ರಕ್ರಿಯೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯನ್ನಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ನಾಯ್ಕ ಅವರನ್ನು ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ನೇಮಕ ಮಾಡಿದೆ.
ಉ.ಕ. ಲೋಕಸಭಾ ಕ್ಷೇತ್ರಕ್ಕೆ ಬರುವ ಏಂಟು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಏಜೆಂಟರ ನೇಮಕಾತಿ ಪ್ರಕ್ರಿಯೆಯನ್ನು ನಿರ್ದಿಷ್ಟ ಸಮಯದೊಳಗೆ
ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸುವ ಮತ್ತು ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್‌ದೊಂದಿಗೆ ಸಮನ್ವಯತೆ ಸಾಧಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ರವೀಂದ್ರ ನಾಯ್ಕ ಅವರನ್ನು ಲೋಕಸಭೆ ಕ್ಷೇತ್ರಕ್ಕೆ ಸಂಯೋಜಕರಾಗಿ ನೇಮಿಸಲಾಗಿದೆ.
ರವೀಂದ್ರ ನಾಯ್ಕ ಅವರು ಕಾಂಗ್ರೆಸ್ ಪಕ್ಷದಲ್ಲಿ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ಘಟಕ(1990), ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ(1993), ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕ(1998), ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ(2008), ರಾಜ್ಯ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕು ಘಟಕದ ಹಿರಿಯ ಉಪಾಧ್ಯಕ್ಷರಾಗಿ (2009) ಕಾರ್ಯನಿರ್ವಹಿಸಿದ್ದು, ಹಾಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವ್ಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.