Advertisement

Child labour ನೇಮಕಾತಿ ಶಿಕ್ಷಾರ್ಹ ಅಪರಾಧ, ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ: ಸಿಎಂ

12:34 PM Jun 12, 2023 | Team Udayavani |

ಬೆಂಗಳೂರು: ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಅವರು ಜೂ.12 ರಂದು ಎಂ.ಜಿ ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪೋಷಕರು, ಮಾತ್ರವಲ್ಲದೆ ಉದ್ಯಮ ನಡೆಸುವವರೂ ಈ ಬಗ್ಗೆ ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಪ್ರಮಾಣ ವಚನ ಬೋಧನೆ ಮಾಡಲಾಗಿದೆ. ಮಕ್ಕಳು ಕಲಿಯುವ ವಯಸ್ಸಿನಲ್ಲಿ ದುಡಿಮೆ ಮಾಡಿದರೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ ಎಂದರು.

ಎಲ್ಲರೂ ವಿದ್ಯೆ ಕಲಿಯಬೇಕು ಅದು ಮೂಲಭೂತ ಹಕ್ಕು ಎಂದು  ಸಂವಿಧಾನ ಹೇಳುತ್ತದೆ. 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳಬಾರದು. ಒಂದು ವೇಳೆ ಕೆಲಸಕ್ಕೆ ತೆಗೆದುಕೊಂಡರೆ ಅದು ಕಾನೂನಿಗೆ ವಿರುದ್ಧ. ಅವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳಬಹುದು. ಜಾಗೃತಿ ಮೂಡಿಸುವುದು ಹಾಗೂ ದುರುದ್ದೇಶದಿಂದ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next