ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆಗೆ 300ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಇದು ಕಾಂಗ್ರೆಸ್ ಕಟ್ಟಿಹಾಕಲು ಮಾಡಿಕೊಂಡಿರುವ ಪ್ಲ್ಯಾನ್ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಚುನಾವಣೆ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಒಂದೇ ಹಂತದಲ್ಲಿ ಚುನಾವಣೆ ನಡೆಸುತ್ತಿರುವ ಆಯೋಗದ ಕ್ರಮ ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಿದ್ದವಾಗಿದೆ.ನಿಷ್ಪಕ್ಷಪಾತ, ಸ್ವತಂತ್ರ ಚುನಾವಣೆ ಮಾಡುವುದು ಆಯೋಗ ಜವಾಬ್ದಾರಿ ಎಂದರು.
ಸಂಪೂರ್ಣ ಚುನಾವಣೆ ವ್ಯವಸ್ಥೆ ಭ್ರಷ್ಟಗೊಳಿಸಿದ್ದು ಬಿಜೆಪಿ.ದೇಶದಲ್ಲಿ ಆಪರೇಷನ್ ಕಮಲ ಮಾಡಿದ್ದು ಬಿಜೆಪಿ. ಈ ಬಾರಿ ಪೊಲೀಸರು, ನಿಯೋಜನೆಗೊಂಡ ಅಧಿಕಾರಿಗಳನ್ನೇ ಬಳಸಿಕೊಂಡು ಅಕ್ರಮ ನಡೆಸುವ ಸಾಧ್ಯತೆ ಇದೆ ಎಂದು ಆರೋಪ ಮಾಡಿದರು.
ಇದನ್ನೂ ಓದಿ : Karnataka Poll 2023;ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ; ನೀತಿ ಸಂಹಿತೆ ಜಾರಿ