Advertisement
ಕಾಸರಗೋಡಿನಲ್ಲಿ ಕನ್ನಡ ಶಾಲೆಗೆ ಮಲೆಯಾಳಿ ಶಿಕ್ಷಕರನ್ನು ನೇಮಕ ಮಾಡಿದಂತೆ ಇತ್ತ ಮಹಾರಾಷ್ಟ್ರ ಸರಕಾರವೂ ಕನ್ನಡ ಶಾಲೆಗಳಿಗೆ ಮರಾಠಿ ಮಾಧ್ಯಮದ ಶಿಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಈ ಆದೇಶ ಸಾಂಗ್ಲಿ ಹಾಗೂ ಸೊಲ್ಲಾಪುರ ಜಿಲ್ಲೆಗಳ 40 ಸಾವಿರಕ್ಕಿಂತ ಹೆಚ್ಚಿನ ಮಕ್ಕಳಿಗೆ ಅತಂತ್ರ ಸ್ಥಿತಿ ತಂದೊಡ್ಡಿದೆ.
Related Articles
ಈ ಶಿಕ್ಷಕರಿಗೆ ಕನ್ನಡದ ಗಂಧ ಗಾಳಿಯೂ ಇಲ್ಲ ಎಂದು ಜತ್ ತಾಲೂಕಿನ ಕನ್ನಡ ಹೋರಾಟಗಾರರಾದ ಸರೋಜಿನಿ ಬಿರಾದಾರ ಕಿಡಿಕಾರಿದ್ದಾರೆ. ಮಹಾರಾಷ್ಟ್ರ ಸರಕಾರದ ಈ ಆದೇಶದ ವಿರುದ್ಧ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ವಿರೋಧ ಮಾಡುತ್ತಿದ್ದಾರೆ. ಆದರೆ ಸರಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರಾಜ್ಯ ಸರಕಾರ ತುರ್ತಾಗಿ ಇಲ್ಲಿನ ಕನ್ನಡಿಗರ ಬೆನ್ನೆಲುಬಾಗಿ ನಿಲ್ಲಬೇಕಿದೆ. ಇಲ್ಲವಾದಲ್ಲಿ ಈ ಭಾಗದಲ್ಲಿ ಕನ್ನಡ ಶಾಲೆಗಳು ನಶಿಸಿ ಹೋಗಲಿವೆ ಎಂದು ಗಡಿ ಭಾಗದ ಕನ್ನಡಿಗರು ಆತಂಕ ವ್ಯಕ್ತಪಡಿಸಿದ್ದಾರೆ.
Advertisement