Advertisement
ಚಿಕ್ಕಬಳ್ಳಾಪುರ ನಗರದ ವಿಶ್ವೇಶ್ವರಯ್ಯ ವೃತ್ತದಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾದರೂ ಸಹ ದ್ವಿತೀಯ ಹಂತದಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರನ್ನು ಜಾಗೃತಿಗೊಳಿಸುವ ಸಲುವಾಗಿ ಅರಿವು ಮತ್ತು ಜಾಗƒತಿ ಮೂಡಿಸುವ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ನಿರ್ಲಕ್ಷ್ಯ ಮಾಡುವ ನಾಗರಿಕರಿಗೆ ದಂಡ ವಿಧಿಸಲು ವಾರ್ಡ್ ಮಟ್ಟದಲ್ಲಿ ಮಾರ್ಷಲ್ ಸೈನಿಕರನ್ನು ನೇಮಕ ಮಾಡಲಾಗಿದೆ ಎಂದರು.
Related Articles
Advertisement
ಪಾತಪಾಳ್ಯ: ಗ್ರಾಮ ಸ್ವಚ್ಛತೆ, ವೈಯಕ್ತಿಕಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಬಿಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿರೀಶ್ ಕಶ್ಯಪ್ ತಿಳಿಸಿದರು.
ರಾಶ್ಚೆರವು ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶೇಷ ಗ್ರಾಮಸಭೆ ಹಾಗೂ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಮನೆಗಳ ಮುಂದೆ ಹರಿಸುವ ಮಲೀನ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು,ಜನರು ಸ್ವತ್ಛತೆಗೆ ಆದ್ಯತೆ ನೀಡಬೇಕು. ಖಾಲಿ ಇರುವ ಸ್ಥಳದಲ್ಲಿ ಗಿಡಮರಗಳನ್ನು ನೆಟ್ಟು ಉತ್ತಮ ಪರಿಸರ ನಿರ್ಮಿಸಿಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಕಂಡ ಕೂಡಲೇ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್‌ನಿಂದ ದೂರವಿರಲು ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಪಿಡಿಒ ನಾರಾಯಣಸ್ವಾಮಿ ಮಾತನಾಡಿ, ಜನರ ಸಹಭಾಗಿತ್ವವಿದ್ದಾಗ ಮಾತ್ರ ಕೋವಿಡ್ ದಿಂದ ಮುಕ್ತರಾಗಬಹುದು. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದವರಿಗೆ ಗ್ರಾಪಂನಿಂದ ದಂಡ ಹಾಕಲಾಗುವುದು ಎಂದರು. ಕರ ವಸೂಲಿಗಾರ ವಿ.ನಂಜುಂಡಪ್ಪ ಡಿಇಒ ಜಿ.ವಿ.ಮಂಜುನಾಥ, ಸಿಬ್ಬಂದಿ ಸೀನಪ್ಪ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿದ್ದರು