Advertisement

ಮರಳು ಅಕ್ರಮ ಸಾಗಣೆ ತಡೆಗೆ ಅಧಿಕಾರಿಗಳ ನೇಮಕ

11:38 AM Sep 18, 2019 | Suhan S |

ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಯಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.

Advertisement

ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ರಚಿಸಲಾಗಿದೆ. ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು ಮತ್ತು ಹಾವೇರಿ ತಾಲೂಕಿನ ತುಂಗಭದ್ರಾ ನದಿ ದಡದಲ್ಲಿ ಬರುವ ಗ್ರಾಮಗಳಿಗೆ ಅನಿರೀಕ್ಷಿತ ದಾಳಿಗಳನ್ನು ನಡೆಸಿದ್ದಾಗಲೂ ಪೂರ್ಣ ಪ್ರಮಾಣದಲ್ಲಿ ಮರಳು ಅಕ್ರಮ ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಮೇಲುಸ್ತುವಾರಿಗೆ ನೇಮಿಸಲಾಗಿದೆ.

ಸೆ.15ರಿಂದ ಅಕ್ಟೋಬರ್‌ 30ರವರೆಗೆ 46 ದಿನಗಳ ಕಾಲ ಪ್ರತಿ ದಿನ ಒಬ್ಬ ಅಧಿಕಾರಿಯಂತೆ ಉಸ್ತುವಾರಿಗೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಈ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ನೇಮಕಗೊಂಡ ಅಧಿಕಾರಿಗಳು ದಿನದ 24 ಗಂಟೆ ತುಂಗಭದ್ರಾ ನದಿದಡದ ಎಲ್ಲ ಗ್ರಾಮಗಳಿಗೆ ಭೇಟಿ ನೀಡುವುದು. ಸಾರ್ವಜನಿಕ ದೂರುಗಳನ್ನು ಸ್ವೀಕರಿಸುವುದು.

ಅಬಕಾರಿ ಉಪ ಆಯುಕ್ತರು, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಯೋಜನಾ ಅನುಷ್ಠಾನ ಅಭಿಯಂತರರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪ ನಿರ್ದೇಶಕರು, ಡಿಡಿಪಿಐ, ಕೃಷಿ ಜಂಟಿ ನಿರ್ದೇಶಕರು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಜಿಲ್ಲಾ ನೋಂದಣಿ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಡಾ.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಕಾರ ಸಂಘಗಳ ಉಪ ನಿಬಂಧಕರು, ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌, ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿರ್ವಾಹಕ ಇಂಜಿನಿಯರ್‌, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ, ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ, ಭೂ ಮಾಪನ ಇಲಾಖೆ ಹಾಗೂ ರೇಷ್ಮೆ ಇಲಾಖೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಗೃಹಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಜಿಪಂ ಯೋಜನಾ ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಉಪ ಕೃಷಿ ನಿರ್ದೇಶಕರು, ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕರು, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ಪರಿಸರ ಅಧಿಕಾರಿ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಜಿಲ್ಲಾ ಅಂಗವಿಕಲರ ಕಲ್ಯಾಣಾಕಾರಿ, ಆಹಾರ ಸುರಕ್ಷತೆ ಇಲಾಖೆ ಅಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ, ಪಪೂ ಶಿಕ್ಷಣ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಉಪನಿರ್ದೇಶಕರು ಪ್ರತಿದಿನ ಒಬ್ಬರಂತೆ ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next