ಬೀದರ್ : ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಅಂತಿಮ ಪಟ್ಟಿಯನ್ನು ಈ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಮುಂದಿನ ಒಂದೂವರೆ ತಿಂಗಳಲ್ಲಿ ಪರಿಶೀಲನೆ ಪ್ರಕ್ರಿಯೆ ಮುಗಿಸಿ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಇದನ್ನೂ ಓದಿ : ವಿದೇಶಿ ಮಾರುಕಟ್ಟೆಗೆ ಕೊರಳ್ಳಿ ಬಾಳೆ; ಹಳದಿ ಕಲ್ಲಂಗಡಿ ಬೆಳೆದಿದ್ದ ರೈತನ ಸಾಧನೆ
ಔರಾದ್ ನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ
15 ಸಾವಿರ ಹೊಸ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ 10ರಿಂದ 12 ಸಾವಿರ ಶಿಕ್ಷಕರನ್ನು 1:2 ನಂತೆ ನೇಮಕ ಮಾಡಲಾಗುವುದು. 2014ರ ಮುನ್ನ ಶಾಲಾ ಕೋಣೆಗಳ ನಿರ್ಮಾಣಕ್ಕೆ ಪ್ರಾಮುಖ್ಯ ನೀಡದ ಕಾರಣ ಈಗ ಕೊರತೆ ಎದುರಾಗಿದೆ. ರಾಜ್ಯದಲ್ಲಿ ಹೊಸದಾಗಿ 8100 ಕೋಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ತಾವು ಮಾಡಿದ್ದು ಏನೆಂದು ಹೇಳಿಕೊಳ್ಳಲು ಮತ್ತು ಅಭಿವೃದ್ಧಿ ವಿಷಯಗಳ ಬಗ್ಗೆ ಮಾತಾಡಲು ವಿಷಯಗಳಿಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಮಾತನಾಡುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಮತ್ತು ಪರ ಯಾರಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಸ್ಥಾನ ಸಿಗದೇ ಇದ್ದಾಗ, ಸ್ಥಾನದ ಮರ್ಯಾದೆ ಹಾಳು ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಹೇಳಿದರು.