ಬೆಂಗಳೂರು: 2022ರ ಪದವೀಧರ ಪ್ರಾಥಮಿಕ ಶಿಕ್ಷಕ (ಆರರಿಂದ ಎಂಟನೇ ತರಗತಿ) ವೃಂದದ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಒಟ್ಟು 15 ಸಾವಿರ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ 13,352 ಮಂದಿ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಫೆ. 27ರಂದು ಪ್ರಕಟವಾಗಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,351 ಮಂದಿ ಆಯ್ಕೆಯಾಗಿದ್ದು, ಮುಖ್ಯ ಆಯ್ಕೆ ಪಟ್ಟಿಯಲ್ಲಿ ನೇಮಕಾತಿಯಲ್ಲಿ ಒಬ್ಬರ ಸಂಖ್ಯೆ ಹೆಚ್ಚಳವಾಗಿದೆ.
ಮೂಲವೃಂದದಲ್ಲಿ 9,159 ಮಂದಿ, ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ 4,193 ಮಂದಿ ನೇಮಕಗೊಂಡಿದ್ದಾರೆ. ಒಟ್ಟು 21 ಎಂಜಿನಿಯರಿಂಗ್ ಅಭ್ಯರ್ಥಿಗಳು, ಮೂವರು ತೃತೀಯ ಲಿಂಗಿಗಳು ಆಯ್ಕೆ ಆಗಿದ್ದಾರೆ. ಇನ್ನು, ಆಯ್ಕೆ ಆಗಿರುವ ಅಭ್ಯರ್ಥಿಗಳು ಸಲ್ಲಿಸಿರುವ ಎಲ್ಲ ದಾಖಲೆಗಳ ಸಿಂಧುತ್ವದ ಪರಿಶೀಲನೆ ನಡೆಯಲಿದೆ.