ಹೊಸದಿಲ್ಲಿ: ಮೂಲಸೌಕರ್ಯ ಮತ್ತು ಸಂಬಂಧಿತ ಇತರೆ ಕ್ಷೇತ್ರಗಳಲ್ಲಿ ದಾಪುಗಾಲು ಇಡುತ್ತಿರುವ ಭಾರತದಲ್ಲಿ ಉದ್ಯೋಗ ಮತ್ತು ಸ್ವ-ಉದ್ಯೋಗಕ್ಕೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಯೋಗ ಮೇಳ ಉದ್ದೇಶಿಸಿ ಮಾತನಾಡಿದ ಅವರು,
“ಪಾರದರ್ಶಕತೆ ಮತ್ತು ವೇಗವನ್ನು ಹೆಚ್ಚಿಸುವ ಮೂಲಕ ನೇಮಕ ಪ್ರಕ್ರಿಯೆಯಲ್ಲಿ ಸರಕಾರವು ದೊಡ್ಡ ಮಟ್ಟದ ಬದಲಾವಣೆ ತಂದಿದೆ,’ ಎಂದರು.
“ಭಾರತ ವೇಗವಾಗಿ ಬೆಳೆಯುತ್ತಿದೆ. ಕಳೆದ 8 ವರ್ಷಗಳಲ್ಲಿ ಮೂಲಸೌಕರ್ಯ ವಲಯದಲ್ಲಿ ತೀವ್ರ ಬೆಳವಣಿಗೆಯು ಸ್ವ-ಉದ್ಯೋಗ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಳನ್ನು ಸೃಷ್ಟಿಸಿದೆ,’ ಎಂದರು. ಇದೇ ವೇಳೆ ವಿವಿಧ ಸರಕಾರಿ ಇಲಾಖೆಗಳಲ್ಲಿ 71,426 ಮಂದಿಗೆ ಎಲೆಕ್ಟ್ರಾನಿಕ್ ಮೂಲಕ ನೇಮಕ ಪತ್ರಗಳನ್ನು ವಿತರಿಸಿದರು.