Advertisement

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

01:41 AM Oct 02, 2024 | Team Udayavani |

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ಅ. 3ರಂದು ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.

Advertisement

ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇಲ್ಲ. ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

ಎಲ್ಲ ಕೊಠಡಿಗಳಲ್ಲೂ ಕೆಮರಾ ಅಳವಡಿಸಿದ್ದು ವೆಬ್‌ ಕಾಸ್ಟಿಂಗ್‌ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತೀ ಕೇಂದ್ರದಲ್ಲೂ ಮೊಬೈಲ್‌ ಜಾಮರ್‌ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು ಆಸುಪಾಸಿನಲ್ಲಿ ಬ್ಲೂಟೂಥ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ವಸ್ತುಗಳು ಕಾರ್ಯನಿರ್ವಹಿಸ
ದಂತೆ ಮಾಡಲಾಗಿದೆ ಎಂದರು.

ಇಎನ್‌ಟಿ ವೈದ್ಯರ ನಿಯೋಜನೆ
ಹಿಂದೆಲ್ಲ ಪರೀಕ್ಷೆ ನಡೆದಾಗ ಕಿವಿಯೊಳಗೆ ಅತಿ ಸೂಕ್ಷ್ಮ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಇಟ್ಟುಕೊಂಡು ಬಂದು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರತೀ ಪರೀ ಕ್ಷಾ ಕೇಂದ್ರದಲ್ಲೂ ಒಬ್ಬ ಕಿವಿ-ಮೂಗು-ಗಂಟಲು (ಇಎನ್‌ಟಿ) ತಜ್ಞರನ್ನು ನಿಯೋಜಿಸಿದ್ದು ಅವರು ಕೂಡ ನಿಗಾ ಇಡಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next