Advertisement
ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪೈಂಗಿಣ ರಸ್ತೆಯಲ್ಲಿ ನೀರು ತುಂಬಿಕೊಂಡಿದೆ. ಮಳೆ ಮುಂದುವರಿದರೆ ವಾಹನ ಚಾಲಕರು ಮತ್ತು ಪಾದಚಾರಿಗಳಿಗೆ ರಸ್ತೆ ಸಂಚಾರ ಅಪಾಯಕಾರಿಯಾಗಬಹುದು ಎಂಬ ಆತಂಕ ಎದುರಾಗಿದೆ. ಅಕ್ಟೋಬರ್ 02, 2009 ರಂದು ಗೋವಾದ ಕಾಣಕೋಣದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ನಿವಾಸಿಯೊಬ್ಬರು ಅದೇ ರಸ್ತೆಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಪ್ರಸಕ್ತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಯ ಎರಡೂ ಬದಿಯ ಹೊಲಗಳು ಕೂಡ ಜಲಾವೃತವಾಗಿವೆ.ಗಾಲ್ಜೀಬಾಗ್ ನದಿಯ ನೀರು ಉಕ್ಕಿ ಹರಿಯಲಾರಂಭಿಸಿದೆ.
ಗೋವಾ ಹವಾಮಾನ ಇಲಾಖೆ ಗುರುವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಜುಲೈ 9 ರ ವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆದರೆ, ಹವಾಮಾನ ಇಲಾಖೆ ಗುರುವಾರ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಗೋವಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ನಾಗರಿಕರಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಪ್ರಕಟಿಸಿದೆ. ಇದನ್ನೂ ಓದಿ: Video… ಆನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕೈಯಲ್ಲಿ ಹಿಡಿದು ಓದಿ ಬಂದ ಯುವಕರು