Advertisement

ರಾಜ್ಯದ ಕರಾವಳಿ ಭಾಗದಲ್ಲಿ ರೆಡ್‌ ಅಲರ್ಟ್‌ ಘೋಷಣೆ

11:32 PM Oct 21, 2019 | Lakshmi GovindaRaju |

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮತ್ತಷ್ಟು ತೀವ್ರಗೊಂಡಿದೆ. ಪರಿಣಾಮ ಮುಂದಿನ ಮೂರ್‍ನಾಲ್ಕು ದಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗಿದ್ದು, ಕರಾವಳಿಯಲ್ಲಿ “ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಹಿಂಗಾರು ಮಾರುತಗಳ ಜತೆಗೆ ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ.

Advertisement

ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಿತ್ತಳೆ ಬಣ್ಣದ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಅಕ್ಟೋಬರ್‌ 23, 24 ಮತ್ತು 25ರಂದು “ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಸಾಮಾನ್ಯವಾಗಿ ದಿನದಲ್ಲಿ 204.5 ಮಿ.ಮೀ.ಗಿಂತ ಹೆಚ್ಚು ಮಳೆ ಸುರಿಯುವ ಪ್ರದೇಶದಲ್ಲಿ ಈ ಮುನ್ನೆಚ್ಚರಿಕೆ ನೀಡಲಾಗುತ್ತದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ.

ಅದೇ ರೀತಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಮೂರ್‍ನಾಲ್ಕು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡು ಪ್ರದೇಶ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಮಳೆ ಅಬ್ಬರ ತುಸು ಹೆಚ್ಚು ಇರಲಿದೆ. ಉತ್ತರ ಕರ್ನಾಟಕದಲ್ಲಿ ಈಗಷ್ಟೇ ನೆರೆ ಹಾವಳಿಯಿಂದ ಜನ ಚೇತರಿಸಿಕೊಳ್ಳುತ್ತಿದ್ದಾರೆ. ಅಷ್ಟರಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದ್ದು, ಆ ಭಾಗದ ನಿದ್ದೆಗೆಡಿಸಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಇದ್ದ ಅಲ್ಪ ಬೆಳೆಯೂ ಕೈಗೆ ಸಿಗದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next