Advertisement

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

09:35 PM Jul 05, 2024 | Team Udayavani |

ಉಡುಪಿ : ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ.  ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಮೊದಲು ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿತ್ತು. ಮಳೆ ತೀವ್ರವಾದ ಕಾರಣ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ಶುಕ್ರವಾರ ರಾತ್ರಿ ರಜೆ ಘೋಷಣೆ ಮಾಡಿದ್ದಾರೆ.

ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಎರಡು ದಿನಗಳಲ್ಲಿ, ಜುಲೈ 6 ಮತ್ತು 7, ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next