Advertisement
ಮಂಗಳೂರು ನಗರ ಸಹಿತ ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಮಳೆಯ ತೀವ್ರತೆ ತುಸು ಕಡಿಮೆಯಾಗಿದ್ದು, ಮತ್ತೆ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. “ರೆಡ್ ಅಲರ್ಟ್’ ಅವಧಿಯಲ್ಲಿ ಕರಾವಳಿ ಭಾಗದಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ನಿರೀಕ್ಷೆ ಇದೆ. ಜೂ.24, ಜೂ.23 ಮತ್ತು 25 ರಂದು “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣ ಮಳೆ ಸುರಿದಿದೆ. ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ಸುಳ್ಯ ಭಾಗದಲ್ಲಿ ಮಳೆಯಾಗಿದೆ. ಮಂಗಳೂರಿನಲ್ಲಿ ಬೆಳಗ್ಗೆ, ಸಂಜೆ ಮಳೆಯಾಗಿತ್ತು. ಮೂಡುಬಿದಿರೆ ಪರಿಸರದಲ್ಲಿ ರಾತ್ರಿ ವೇಳೆ ಭಾರೀ ಮಳೆ ಸುರಿದಿದೆ.ಉಳಿದಂತೆ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಉಡುಪಿಯಲ್ಲಿ ಭಾರೀ ಮಳೆ
ಉಡುಪಿ: ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮತ್ತು ಶುಕ್ರವಾರ ಉತ್ತಮ ಮಳೆಯಾಗಿದ್ದು, ಮುಂದಿನ 2 ದಿನಗಳ ಅತ್ಯಧಿಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Related Articles
Advertisement
ಬೆಳಗ್ಗೆ ಮತ್ತು ಸಂಜೆಯ ವೇಳೆ ಉತ್ತಮ ಮಳೆಯಾಗಿದೆ. ಕುಂದಾಪುರ, ಬೈಂದೂರು, ಬ್ರಹ್ಮಾವರ ಪರಿಸರದಲ್ಲಿ ಉತ್ತಮ ಮಳೆ ಸುರಿದಿದೆ.
ಹಲವೆಡೆ ಗಾಳಿ ಮಳೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.