Advertisement

Red alert ;ದ.ಕ,ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಜು.16 ರಂದು ಪಿಯುಸಿವರೆಗೆ ರಜೆ

09:35 PM Jul 15, 2024 | Team Udayavani |

ಬೆಂಗಳೂರು :ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯೂ ರೆಡ್ ಅಲರ್ಟ್ ಘೋಷಿಸಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತ ವಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು  ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜುಲೈ 16 (ಮಂಗಳವಾರ) ರಂದು ಜಿಲ್ಲಾಡಳಿತಗಳು ರಜೆ ಘೋಷಿಸಿವೆ.

Advertisement

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ , ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ,  ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಸೋಮವಾರ ಮೂರು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿದಿದ್ದು, ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next