ತಮಿಳುನಾಡು: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು,ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಡಿಸೆಂಬರ್ 8 ಕ್ಕೆ ತಮಿಳುನಾಡಿನ 13 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ವಾಯುಭಾರ ಕುಸಿತದಿಂದಾಗಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಮಳೆ ಬೀಳುವ ಸಾಧ್ಯತೆಯಿದ್ದು ಜೊತೆಗೆ ಮಳೆಯ ಪ್ರಮಾಣ ತೀವ್ರಗೊಗೊಂಡು ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿನ ವಿಲ್ಲುಪುರಂ, ಚೆಂಗಲ್ಪಟ್ಟು, ಕಡಲೂರು, ಕಾಂಚೀಪುರಂ, ತಿರುವಳ್ಳೂರು, ಅರಿಯಲೂರು, ಪೆರಂಬಲೂರು, ಚೆನ್ನೈ, ಕಲ್ಲಕುರಿಚಿ, ಮೈಲಾಡುತುರೈ, ತಂಜಾವೂರು, ತಿರುವಾರೂರ್ ಮತ್ತು ನಾಗಪಟ್ಟಣಂ ಸೇರಿದಂತೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಡಿಸೆಂಬರ್ 6 ರ ಸಂಜೆ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತವಾಗಿ ಕೇಂದ್ರೀಕೃತವಾಗಲಿದೆ ಎಂದು ಹವಾಮಾನ ಇಲಾಖೆಯ ಉಪ ಮಹಾನಿರ್ದೇಶಕ ಎಸ್ ಬಾಲಚಂದ್ರನ್ ಹೇಳಿದ್ದಾರೆ.
ಅದರಂತೆ ಡಿಸೆಂಬರ್ 7 ರಂದು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಮಳೆಯಾಗಲಿದೆ. ಈ ವೇಳೆ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ದೇಶದಲ್ಲಿ ಯಾವುದೇ ಚುನಾವಣೆ ನಡೆದರೂ ಗೆಲುವು ಬಿಜೆಪಿಯದ್ದೇ: ಈಶ್ವರಪ್ಪ