Advertisement
ಶ್ರೀಲಂಕಾಕ್ಕೆ ಸನಿಹದ ಪ್ರಾಂತ್ಯವೊಂದರಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ದೈತ್ಯ ಚಂಡ ಮಾರುತದ ಅಲೆಗಳು ಸೃಷ್ಟಿಯಾಗಿದ್ದು ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Related Articles
Advertisement
ಪ್ರವಾಸಿಗರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಮುದ್ರ ತೀರ ಪ್ರದೇಶಗಳು ಮತ್ತು ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಬುಧವಾರ ಸಂಜೆಯಿಂದ ತ್ರಿಶೂರ್‌ನಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಆರಂಭವಾಗಿದ್ದು, ಜನ ಜೀವನ ಅಸ್ತವ್ಯಸ್ತ ವಾಗಿದೆ.
ಕಳೆದ ತಿಂಗಳಿನಲ್ಲಿ ಸುರಿದ ಮಹಾಮಳೆಗೆ ಮುಳುಗಡೆಯಾಗಿದ್ದ ಕೇರಳದಲ್ಲಿ 231 ಮಂದಿ ಪ್ರಾಣ ಕಳೆದುಕೊಂಡಿದ್ದರು,ಸಾವಿರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು.