Advertisement

Red Alert: ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್… ಜುಲೈ 16ರಂದು ಶಾಲಾ- ಕಾಲೇಜುಗಳಿಗೆ ರಜೆ

02:43 PM Jul 15, 2024 | Team Udayavani |

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಅದರಂತೆ ಹೊಸನಗರ ತಾಲೂಕಿಗೆ ನಾಳೆ (ಜುಲೈ 16) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಇದರ ಹಿನ್ನೆಲೆ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

Advertisement

ಹೊಸನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಭಾರಿ ಮಳೆಯ ಹಿನ್ನೆಲೆ ಮಕ್ಕಳು ಜಲಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ, ಇಂದು ಕೂಡ ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ.

ಇದನ್ನೂ ಓದಿ: Omar Abhullah: ಪತ್ನಿಯಿಂದ ವಿಚ್ಛೇದನ ಕೊಡಿಸಿ…ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಓಮರ್!

Advertisement

Udayavani is now on Telegram. Click here to join our channel and stay updated with the latest news.

Next