ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಅಂಗನವಾಡಿ, ಪ್ರಾಥಮಿಕ , ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (ಪಿಯುಸಿ ವರೆಗೆ )ಜೂ.28 ರಂದು(ಶುಕ್ರವಾರ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದ್ದು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ.
ಜಿಲ್ಲಾದ್ಯಂತ
24*7 ತುರ್ತು ಸೇವೆಗೆ
1077 , 0824 2442590 ಟೋಲ್ ಫ್ರೀ ಸಂಖ್ಯೆ ಯನ್ನು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಉಡುಪಿಯಲ್ಲಿ ರಜೆ ಇಲ್ಲ ಎಂದ ಜಿಲ್ಲಾಧಿಕಾರಿ
ಉಡುಪಿಯಲ್ಲಿ ರೆಡ್ ಅಲರ್ಟ್ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿದಿಲ್ಲ. ಶಾಲಾ ಕಾಲೇಜು ತರಗತಿಗಳು ಜೂ.28ರಂದು ಎಂದಿನಂತೆ ನಡೆಯಲಿದೆ. ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸ್ಪಷ್ಟ ಪಡಿಸಿದ್ದಾರೆ.
ಇದನ್ನೂ ಓದಿ: Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು
ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ,ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದರು.