Advertisement

ಕೆಂಪುಕೋಟೆ ಹಿಂಸಾಚಾರ ಪ್ರಕರಣ: ಪಂಜಾಬ್ ನಲ್ಲಿ ಆರೋಪಿ ಗುರ್ಜೋತ್ ಸಿಂಗ್ ಬಂಧನ

01:24 PM Jun 28, 2021 | Team Udayavani |

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಯಿಸಿಕೊಂಡಿದ್ದ ಆರೋಪಿ ಗುರ್ಜೋತ್ ಸಿಂಗ್ ನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ಸೋಮವಾರ(ಜೂನ್ 28) ಬಂಧಿಸಿರುವುದಾಗಿ ತಿಳಿಸಿದೆ.

Advertisement

ಇದನ್ನೂ ಓದಿ:ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್

ಆರೋಪಿ ಗುರ್ಜೋತ್ ಸಿಂಗ್ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು. ಈತನನ್ನು ಪಂಜಾಬ್ ನ ಅಮೃತಸರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ(ವಿಶೇಷ ವಿಭಾಗ) ಸಂಜೀವ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಜೋತ್ ಸಿಂಗ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ಈತನ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಇಲಾಖೆ ಘೋಷಿಸಿತ್ತು. ಕೆಂಪುಕೋಟೆ ಪ್ರಕರಣದಲ್ಲಿ ಈವರೆಗೆ ಬಂಧನಕ್ಕೊಳಗಾದ 17ನೇ ವ್ಯಕ್ತಿ ಸಿಂಗ್, ಅಲ್ಲದೇ ನಗದು ಬಹುಮಾನ ಘೋಷಿಸಿದ್ದ ಆರು ಮಂದಿ ಆರೋಪಿಗಳು ಇನ್ನೂ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ವರದಿ ಹೇಳಿದೆ.

ಗಣರಾಜ್ಯೋತ್ಸವ ದಿನ ಸಾವಿರಾರು ರೈತರು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ನೂತನ ಮೂರು ಕೃಷಿ ಕಾಯ್ದೆ ವಿರೋಧಿಸಿ ರಾಜಧಾನಿಯಲ್ಲಿ ಟ್ರ್ಯಾಕ್ಟರ್ ರಾಲಿ ನಡೆಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಕೆಲವು ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಏರಿ ಸಿಖ್ಭ್ ಧರ್ಮದ ಬಾವುಟ ಹಾರಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next