Advertisement

ರೆಡ್ಡಿ, ಅಲಿಖಾನ್‌ ವಿರುದ್ಧ ಬಲವಂತದ ಕ್ರಮ ಬೇಡ

06:00 AM Nov 28, 2018 | |

ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಜತೆಗೆ “ಡೀಲ್‌’ ಮಾಡಿದ ಆರೋಪಕ್ಕೆ ಸಂಬಂಧಿಸಿ
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್‌
ಮಂಗಳವಾರ ನಿರ್ದೇಶನ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಸಿಸಿಬಿ ಪೊಲೀಸರು ದಾಖಲಿಸಿಕೊಂಡಿರುವ
ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಅಲಿ ಖಾನ್‌ ಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ
ವಿಚಾರಣೆ ನಡೆಸಿದ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಅರ್ಜಿದಾರರ
ವಿರುದಟಛಿ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ನಿರ್ದೇಶಿಸಿ, ವಿಚಾರಣೆಯನ್ನು ಡಿ.4ಕ್ಕೆ ಮುಂದೂಡಿದೆ. ಅಲ್ಲದೆ, ಮತ್ತೂಬ್ಬ
ಆರೋಪಿ ಅಲಿಖಾನ್‌ ಈಗಾಗಲೇ ಪೊಲೀಸ್‌ ವಶದಲ್ಲಿದ್ದಾನೆ. ವಿಚಾರಣೆ ನಡೆಯುತ್ತಿದೆ. ಆತನ ಬಂಧನ ಅವಧಿ ನ.29ಕ್ಕೆ ಕೊನೆಗೊಳ್ಳಲಿದ್ದು, ಅಲ್ಲಿಯವ ರೆಗೆ ವಿಚಾರಣೆ ನಡೆಸಲು ಅವಕಾಶ ನೀಡಬೇಕು. ಆನಂತರ ಆತನ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಸಿಸಿಬಿ ಪರ ವಕೀಲರು ಹೇಳಿದರು. ಇದನ್ನು ಒಪ್ಪಿದ ನ್ಯಾಯಪೀಠ, ಹಾಗಾದರೆ, ಅಲಿಖಾನ್‌  ವಿರುದ್ಧ ನ.29 -ಡಿ.4ರವರೆಗೆ ಯಾವುದೇ ಮುಂದಿನ ಕ್ರಮ ಜರುಗಿಸದಂತೆ ಸೂಚಿಸಿತು. 

Advertisement

ಅಲಿಖಾನ್‌ಗೆ ಯಾವುದೇ ಸಂಬಂಧವಿಲ್ಲ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀ ಲರು ವಾದ ಮಂಡಿಸಿ, ರೆಡ್ಡಿ, ಅಲಿಖಾನ್‌ಗೂ
ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಚಾರವನ್ನು ಅಧೀನ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳೇ ಸಲ್ಲಿಸಿದ್ದ ರಿಮ್ಯಾಂಡ್‌
ಅರ್ಜಿಯಲ್ಲಿ ಉಲ್ಲೇಖೀಸಿದ್ದಾರೆ. ಆ್ಯಂಬಿ ಡೆಂಟ್‌ ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಸಾರ್ವಜನಿಕರಿಗೆ ರೆಡ್ಡಿ ಹೇಳಿಲ್ಲ. 5 ತಿಂಗಳಿಂದ
ತನಿಖೆ ನಡೆದಿದ್ದು, ಅವರ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ. ಹೂಡಿಕೆದಾರರ ರಕ್ಷಣಾ ಕಾಯ್ದೆ ಅರ್ಜಿದಾರರಿಗೆ ಅನ್ವಯವಾಗುವುದಿಲ್ಲ.
ಎಫ್ಐಆರ್‌ ಮತ್ತು ವಿಚಾರಣೆಗೆ ತಡೆ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ತನಿಖೆಗೇಕೆ ತಡೆ ನೀಡಬೇಕೆಂದು ಕೇಳಿದರು.

ಅರ್ಜಿದಾರರ ವಕೀಲರು ಉತ್ತರಿಸಿ, ಜನಾ ರ್ದನ ರೆಡ್ಡಿ ಅವರಿಗೆ ಮಂಜೂರು ಮಾಡಿರುವ ಜಾಮೀನು ಆದೇಶ ರದ್ದುಪಡಿಸಲು ಅಧೀನ
ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಹಾಗೂ ಮತ್ತೂಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜನಾರ್ದನರೆಡ್ಡಿಗೆ ನೋಟಿಸ್‌
ನೀಡಲು ಸಿಸಿಬಿ ಪೊಲೀಸರು ಸಿದಟಛಿತೆ ನಡೆಸಿದ್ದಾರೆಂದು ನ್ಯಾಯಪೀಠದ ಗಮನಕ್ಕೆ ತಂದರು.  ಇದಕ್ಕೆ ಆಕ್ಷೇಪಿಸಿದ ಸರ್ಕಾರಿ ಅಭಿಯೋಜ ಕರು, ತನಿಖೆಗೆ ತಡೆಯಾಜ್ಞೆ ನೀಡಬಾರದು. ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮ ಜರುಗಿಸುವು ದಿಲ್ಲ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next