Advertisement

ವಿಡಿಯೋ ಸಂವಾದದಲ್ಲಿ ಮೋದಿ ಮಾತು ಆಲಿಸಿದ ರೆಡ್ಡಿ

05:17 PM Apr 27, 2018 | |

ಬಳ್ಳಾರಿ: ರಾಜ್ಯದ 224 ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಸಂವಾದದಲ್ಲಿ ಮಾತನಾಡಿದ್ದನ್ನು ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸೋಮಶೇಖರರೆಡ್ಡಿ ಗುರುವಾರ ವೀಕ್ಷಿಸಿದರು. ಬಳ್ಳಾರಿಯ ತಮ್ಮ ನಿವಾಸದಲ್ಲಿ ಮಹಿಳಾ ಕಾರ್ಯಕರ್ತರೊಂದಿಗೆ ಮೊಬೈಲ್‌ನಲ್ಲಿ ವಿಡಿಯೋ ಸಂವಾದ ವೀಕ್ಷಿಸಿದ ಸೋಮಶೇಖರರೆಡ್ಡಿಯವರು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಒಂದೊಂದು ಮಾತು ಒಬ್ಬೊಬ್ಬ ಕಾರ್ಯಕರ್ತರ ಮನಮುಟ್ಟಿದೆ ಎಂದರು. 

Advertisement

ಬೂತ್‌ ಮಟ್ಟದಲ್ಲಿ ಗೆಲ್ಲಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯಿಂದ ನಾನು ಪ್ರೇರೇಪಿತನಾಗಿದ್ದೇನೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತವಿದ್ದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯವಾಗುತ್ತದೆ. ಕೇಂದ್ರ ಸರ್ಕಾರ ಕೊಟ್ಟ ಅನುದಾನವನ್ನು ಸಮರ್ಪಕವಾಗಿ ರಾಜ್ಯ ಸರ್ಕಾರಕ್ಕೆ ಬಳಕೆ ಮಾಡಿಕೊಳ್ಳಲು ಆಗಿಲ್ಲ. ಪ್ರಧಾನಿಯವರು ಸಾಮಾನ್ಯ ಕಾರ್ಯಕರ್ತನಾಗಿ ಇಂದು ಉನ್ನತ ಹುದ್ದೆಯಲ್ಲಿರುವುದು ನಿಜಕ್ಕೂ ಅವರ ಸೇವೆಗೆ ಸಂದ ಜಯವಾಗಿದೆ ಎಂದು ಹೇಳಿದರು. ಈ ವೇಳೆ ಮಾಜಿ ಸಂಸದೆ ಜೆ.ಶಾಂತಾ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next