Advertisement

ನಾಗರಿಕ ಸೇವೆಗಳ ಆಯ್ಕೆ ಪ್ರಕ್ರಿಯೆಯ ಕಾಲಾವಧಿ ತಗ್ಗಿಸಲು ಶಿಫಾರಸು

10:02 PM Mar 26, 2023 | Team Udayavani |

ನವದೆಹಲಿ: ನಾಗರಿಕ ಸೇವೆಗಳ ಪರೀಕ್ಷೆಯ ಆಯ್ಕೆ ಪ್ರಕ್ರಿಯೆಯ ಕಾಲಾವಧಿ ತಗ್ಗಿಸುವಂತೆ ಸಂಸದೀಯ ಸಮಿತಿಯು ಕೇಂದ್ರ ನಾಗರಿಕ ಸೇವಾ ಆಯೋಗಕ್ಕೆ(ಯುಪಿಎಸ್‌ಸಿ) ಶಿಫಾರಸು ಮಾಡಿದೆ.

Advertisement

ಐಎಎಸ್‌, ಐಪಿಎಸ್‌ ಸೇರಿದಂತೆ ನಾಗರಿಕ ಸೇವೆಗಳ ಪರೀಕ್ಷೆಗೆ ನೋಟಿಫಿಕೇಶನ್‌ ಆಗಿ, ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆದು, ಅಂತಿಮ ಪಟ್ಟಿ ಬಿಡುಗಡೆಯಾಗಲು ಸುಮಾರು 15 ತಿಂಗಳು ಬೇಕಾಗುತ್ತದೆ. ಈ ದೀರ್ಘಾವಧಿಯು ಅಭ್ಯರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೇ ದೀರ್ಘ‌ ಪ್ರಕ್ರಿಯೆಯು ಅಭ್ಯರ್ಥಿಗಳ ಅಮೂಲ್ಯ ವರ್ಷಗಳನ್ನು ವ್ಯರ್ಥ ಮಾಡುತ್ತದೆ ಎಂದು ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.

ಹೀಗಾಗಿ ನಾಗರಿಕ ಸೇವೆಗಳ ಪರೀಕ್ಷೆಯ ಆಯ್ಕೆ ಪ್ರಕ್ರಿಯೆಯನ್ನು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ಯುಪಿಎಸ್‌ಸಿಗೆ ಸಮಿತಿಯು ಶಿಫಾರಸು ಮಾಡಿದೆ.

2022-23ರಲ್ಲಿ ಯುಪಿಎಸ್‌ ಪರೀಕ್ಷೆಗೆ 32.39 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದರು. ಆದರೆ ಕೇವಲ 16.82 ಲಕ್ಷ ಅಭ್ಯರ್ಥಿಗಳು(ಶೇ.51.95) ಮಾತ್ರ ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next