ವಾರಾಣಸಿ: ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಗ್ಗಿಸುವಂತೆ ತೈಲ ಕಂಪನಿಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಮನವಿ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಕಡಿಮೆಯಾಗಿದ್ದರೂ ಹಿಂದಿನ ನಷ್ಟವನ್ನು ಸರಿದೂಗಿಸುವ ಕಾರಣದಿಂದ 15 ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತೈಲ ಕಂಪನಿಗಳು ತಗ್ಗಿಸಿಲ್ಲ. “ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಕಡಿಮೆಯಾಗುವ ಜತೆಗೆ ನಷ್ಟ ಸರಿದೂಗಿದ ತಕ್ಷಣ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಗ್ಗಿಸುವ ಭರವಸೆ ಇದೆ,’ ಎಂದು ವಾರಾಣಸಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.