Advertisement
ಜಿಲ್ಲೆಯ 6 ತಾಲೂಕುಗಳಲ್ಲಿ 9950 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಆ ಪೈಕಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 7, ಚಿಂತಾಮಣಿ ತಾ.7, ಗೌರಿಬಿದನೂರು4, ಬಾಗೇಪಲ್ಲಿ5, ಶಿಡ್ಲಘಟ್ಟ4, ಗುಡಿಬಂಡೆ 3 ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾಕೇಂದ್ರದಲ್ಲಿ ತೆರೆದಿರುವಕೋವಿಡ್‌ಕೇರ್ ಆಸ್ಪತ್ರೆಯಲ್ಲಿ 150 ಹಾಸಿಗೆಗಳು ಮತ್ತು 20 ವೆಂಟಿಲೇಟರ್ ಸೇವೆ ಒದಗಿಸಲಾಗಿದೆ. ಅದೇ ರೀತಿ ಜಿಲ್ಲಾದ್ಯಂತ 650 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಮೀಸಲಿಡಲಾಗಿದೆ.
Related Articles
Advertisement
166 ವೈದ್ಯರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ 166 ವೈದ್ಯರು, 320 ನರ್ಸ್‌ಗಳು, 88 ಲ್ಯಾಬ್ ಟೆಕ್ನೀಷಿಯನ್‌ಗಳು, 75 ಫಾರ್ಮಾಸಿಸ್ಟ್, 360 ಡಿ ಗ್ರೂಪ್ ನೌಕರರು ಹಾಗೂ 48 ಗಣಕ ಯಂತ್ರ ನಿರ್ವಾಹಕರ ಸೇÊ ೆ ಪಡೆದುಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸೇವೆಯಲ್ಲಿಹಗಲಿರುಳು ತೊಡಗಿಸಿಕೊಂಡಿರುವ ವೈದ್ಯಕೀಯ ಸಿಬ್ಬಂದಿಗೆ ಯಾವುದೇ ತೊಂದರೆ ಯಾಗಿಲ್ಲ. ಸೋಂಕು ನಿಯಂತ್ರಿಸಲು ಬಿಗಿ ಕ್ರಮ ಕೈಗೊಂಡ ಜಿಲ್ಲಾಡಳಿತ ಪ್ರತಿನಿತ್ಯ 1600 ರಿಂದ 1700 ಮಂದಿಗೆಪರೀಕ್ಷೆನಡೆಸಲಾಗುತ್ತಿದೆ.ಜಿಲ್ಲಾದ್ಯಂತ ಇದುವರೆಗೆ 1.03 ಲಕ್ಷ ಮಂದಿಗೆ ಸೋಂಕಿನ ಪರೀಕ್ಷೆ ಮಾಡಲಾಗಿದೆ.
ಕೋವಿಡ್ ಕಾರ್ಯಪಡೆ ಸಕ್ರಿಯ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ನಗರಮತ್ತುಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕಾರ್ಯಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ತಾವು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು. ಈ ಸಂಬಂಧ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕು ನಿಯಂತ್ರಿ ಸಲು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಇತ್ತೀಚಿಗೆ ಮುನ್ನೆಚ್ಚರಿಕೆಕ್ರಮಗಳನ್ನುನಿರ್ಲಕ್ಷಿಸುತ್ತಿರುವ ನಾಗರಿಕರಿಗೆ ದಂಡ ವಿಧಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಮೀಣಾ, ನಗರದಲ್ಲಿ ಜಾಗೃತಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಸರ್ಕಾರಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಪೌರಕಾರ್ಮಿರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಅದರಲ್ಲದೇ ಕ್ಯಾನ್ಸರ್, ಗರ್ಭಿಣಿಯರು, ಡಯಾಲಿಸಿಸ್ ರೋಗಿಗಳು, ಶಸ್ತ್ರಚಿಕಿತ್ಸೆಗೆ ಒಳಪಟ್ಟ, ಅಪಘಾತದಲ್ಲಿಗಾಯಗೊಂಡಗಾಯಾಳುಗಳು, ಟಿಬಿ ಮತ್ತು ಹೆಚ್‌ಐವಿ ಪೀಡಿತ ಸೋಂಕಿತ ರಿಗೂ ಸಹ ಮುನ್ನೆಚ್ಚರಿಕೆಯಾಗಿ ಕೊರೊನಾ ಪರೀಕ್ಷೆ ನಡೆಸಲಾಗಿದೆ.