ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ಸೋಮವಾರ ಸಾಧಾರಣ ಮಳೆಯಾಗಿದೆ.
ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆ.6ರ ಬೆಳಗ್ಗೆ 8.30ರ ವರೆಗೆ ಎಲ್ಲೋ ಅಲರ್ಟ್ ಇದ್ದು, ಉಳಿದಂತೆ ಯಾವುದೇ ಅಲರ್ಟ್ ಘೋಷಿಸಲಾಗಿಲ್ಲ. ಇದರಿಂದಾಗಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಮಂಗಳೂರಿನಲ್ಲಿ ಸೋಮವಾರ 29.9 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಹೆಚ್ಚು ಮತ್ತು 23.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಹೆಚ್ಚಿತ್ತು.
ಉಡುಪಿ: ಮಳೆ ಇಳಿಮುಖ
ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕ್ಷೀಣಗೊಂಡಿದ್ದು, ಸೋಮವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಕುಂದಾಪುರ, ಉಡುಪಿ, ಕಾರ್ಕಳ, ಹೆಬ್ರಿ ಸುತ್ತಮುತ್ತ ಬಿಟ್ಟುಬಿಟ್ಟು ಸಣ್ಣದಾಗಿ ಮಳೆಯಾಗಿದೆ. ರವಿವಾರ ತಡರಾತ್ರಿ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಆಗಾಗ ಸಣ್ಣ ಮಳೆಯಾಗಿದೆ.