Advertisement
ಹೃದಯ ಕಾಯಿಲೆ ಸಮಸ್ಯೆ ಕಡಿಮೆ ಮಾಡುವುದು:ಮೀನುಗಳಲ್ಲಿ ಸ್ಯಾಚುರೇಟೆಡ್ ಫ್ಯಾಟ್‌ಗಳು ಇಲ್ಲದಿರುವ ಕಾರಣ ಇವುಗಳ ಸೇವನೆಯಿಂದ ಮನುಷ್ಯನ ಹೃದಯಕ್ಕೆ ಯಾವುದೇ ಬಗೆಯ ತೊಂದರೆಗಳು ಉಂಟಾಗುವುದಿಲ್ಲ. ಬದಲಿಗೆ ಹೃದಯದ ಆರೋಗ್ಯಕ್ಕೆ ಒಳ್ಳೆಯದೇ ಆಗುತ್ತದೆ. ಇದಕ್ಕೆ ಕಾರಣ ಮನುಷ್ಯನ ಹೃದಯದ ಆರೋಗ್ಯವನ್ನು ಹಾಳು ಮಾಡುವ ಕೊಲೆಸ್ಟ್ರಾಲ್ ಅಂಶವನ್ನು ಮೀನುಗಳ ದಿನ ನಿತ್ಯ ಸೇವನೆಯಿಂದ ದೂರ ಇಡಬಹುದು.
ಮೀನಿನಲ್ಲಿ ವಿಟಮಿನ್ ಡಿ ಸಮೃದ್ಧವಾಗಿದೆ ಮತ್ತು ಇದು ದೇಹಕ್ಕೆ ಬೇಕಾಗುವ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ಮೂಳೆಗಳ ಆರೋಗ್ಯ ಮತ್ತು ಬೆಳವಣಿಗೆಗೆ ಕ್ಯಾಲ್ಸಿಯಂ ಹೀರಿಕೊಳ್ಳಲು ವಿಟಮಿನ್ ಡಿ ಅತೀ ಅಗತ್ಯ. ಸ್ಮರಣಶಕ್ತಿ ವೃದ್ಧಿ:
ಮೀನುಗಳ ಸೇವನೆಯಿಂದ ಮಿದುಳಿನ ಬೆಳವಣಿಗೆಯಾಗಿ ಸ್ಮರಣಶಕ್ತಿ ವೃದ್ಧಿಗೆ ಸಹಕಾರಿಯಾಗಿದೆ. ಇದು ಮಕ್ಕಳಿಗೆ ಬಹಳ ಉಪಯುಕ್ತ.
Related Articles
ಮೀನು ಮತ್ತು ಮೀನಿನ ಎಣ್ಣೆಯು ಖಿನ್ನತೆ ದೂರ ಮಾಡುವುದು. ಇದು ಖಿನ್ನತೆಯ ಲಕ್ಷಣವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯ ಸುಧಾರಿಸುವುದು.
Advertisement
ದೃಷ್ಟಿ ಸುಧಾರಣೆ:ಮೀನಿನಲ್ಲಿ ಇರುವ ಕೊಬ್ಬಿನಾಮ್ಲವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯ ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಯಾಕೆಂದರೆ ಮೆದುಳು ಮತ್ತು ಕಣ್ಣುಗಳು ಒಮೆಗಾ 3 ಕೊಬ್ಬಿನಾಮ್ಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿವೆ ಮತ್ತು ಅವುಗಳ ಆರೋಗ್ಯ ಮತ್ತು ಚಟುವಟಿಕೆಗೆ ಈ ಪೋಷಕಾಂಶಗಳು ಅತೀ ಅಗತ್ಯ. ಸರಿಯಾದ ನಿದ್ರೆ:
ಸರಿಯಾಗಿ ನಿದ್ರೆ ಪೂರ್ತಿಯಾಗದಿದ್ದರೆ ನಿಯಮಿತವಾಗಿ ಮೀನು ಸೇವಿಸಿ. ಮೀನಿನಲ್ಲಿರುವಂತಹ ಉನ್ನತ ಮಟ್ಟದ ವಿಟಮಿನ್ ಡಿ ನಿದ್ರೆ ಸರಾಗವಾಗಿ ಆಗುವಂತೆ ಮಾಡುವುದು. ಉತ್ತಮ ಚರ್ಮ ಮತ್ತು ಕೂದಲು ಬೆಳೆಯಲು ಸಹಕಾರಿ:
ಮೀನು ಸೇವನೆಯಿಂದ ನಿಮ್ಮ ಕೂದಲು ಉದ್ದವಾಗಿ ಬೆಳೆಯಲು ಸಹಕಾರಿ. ಇದರಲ್ಲಿರುವ ಕಡಿಮೆ ಕೊಬ್ಬಿನ ಅಂಶಗಳು ಮತ್ತು ಉತ್ತಮ ಕೊಬ್ಬಿನಾಮ್ಲಗಳು ಕೂದಲು ಉದುರುವುದನ್ನು ಮತ್ತು ಚರ್ಮ ಸುಕ್ಕುಗಟ್ಟುವುದನ್ನು ತಡೆದು ಹೊಳಪು ನೀಡುತ್ತದೆ. ಸಂಧಿವಾತ ಕಡಿಮೆ ಮಾಡುವುದು:
ನೀವು ಸಂಧಿವಾತದಿಂದ ಬಳಲುತ್ತಿದ್ದರೆ ದಿನನಿತ್ಯ ಮೀನಿನ ಸೇವನೆ ಮಾಡಿ. ಸಂಧಿವಾತವು ಗಂಟುಗಳ ತೀವ್ರವಾದ ಉರಿಯೂತವಾಗಿದ್ದು, ನಿಯಮಿತವಾಗಿ ಮೀನು ಸೇವಿಸಿದರೆ ಅದರಿಂದ ನೋವು ಮತ್ತು ಊತ ಕಡಿಮೆ ಮಾಡಬಹುದು. ಕೊಲೆಸ್ಟ್ರಾಲ್ ತಗ್ಗಿಸುವುದು:
ಮೀನು ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಮೀನಿನಲ್ಲಿ ಇರುವಂತಹ ಒಮೆಗಾ 3 ಕೊಬ್ಬಿನಾಮ್ಲವು ದೇಹದಲ್ಲಿ ಇರುವಂತಹ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು. ಮಧುಮೇಹ ತಗ್ಗಿಸುವುದು:
ಟೈಪ್ 1 ಮಧುಮೇಹವನ್ನು ಮೀನು ತಗ್ಗಿಸುವುದು. ಮೀನಿನಲ್ಲಿ ಇರುವಂತಹ ಉನ್ನತ ಮಟ್ಟದ ವಿಟಮಿನ್ ಡಿ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಗ್ಲುಕೋಸ್ ಚಯಾಪಚಯಕ್ಕೆ ನೆರವಾಗುವುದು.