Advertisement

ಗೋಲ್ಡನ್ ಗೋವಾ ಸ್ಥಾಪಿಸಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತನ್ನಿ: ನಡ್ಡಾ

11:38 AM Nov 26, 2021 | Team Udayavani |

ಪಣಜಿ: ಗೋಲ್ಡನ್ ಗೋವಾ ಸ್ಥಾಪಿಸಲು ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರೀಕರ್ ಒಂದು ಕನಸು ಕಂಡಿದ್ದರು ಅದನ್ನು ನನಸು ಮಾಡಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತನ್ನಿ ಎಂದು ರಾಜ್ಯದ ಜನತೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮನವಿ ಮಾಡಿದ್ದಾರೆ.

Advertisement

ಗೋವಾದ ಬಿಚೋಲಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಜೆ.ಪಿ .ನಡ್ಡಾ, ಕೇಂದ್ರ ಹಾಗೂ ಗೋವಾದಲ್ಲಿ ಬಿಜೆಪಿ ಸರಕಾರ ಡಬಲ್ ಎಂಜಿನ್ ಸರ್ಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ರವರ ನೇತೃತ್ವದಲ್ಲಿ ಗೋವಾ ಸರ್ಕಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯ ನಂತರ ಗೋವಾದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಸಾಂಕ್ರಾಮಿಕ ರೋಗವು ದೇಶದ ಮೇಲೆ ವಿನಾಶವನ್ನುಂಟು ಮಾಡಿದೆ. ಅಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಸುರಕ್ಷತೆಗಾಗಿ ಲಸಿಕೆ ಹಾಕಲು ನಿರ್ಧರಿಸಿದ್ದರು. ವ್ಯಾಕ್ಸಿನೇಶನ್ ಆರಂಭಗೊಂಡಾಗ ಅದೇ ವಿರೋಧ ಪಕ್ಷವು ಕೈಸಾ ಲಗಾ ಮೋದಿಕಾ ಟೀಕಾ ಅಥವಾ ಬಿಜೆಪಿಕಾ ಟೀಕಾ ಎಂದು ಟೀಕಿಸಿದ್ದರು. ಪ್ರತಿಪಕ್ಷಗಳ ಯವುದೇ ತಪ್ಪು ಕಲ್ಪನೆಗಳಿಗೆ ಜನತೆ ಬಲಿಯಾಗಬಾರದು ಎಂದು ನಡ್ಡಾ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ಬಿಜೆಪಿ ಗೋವಾ ಪ್ರಭಾರಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಮಾಜಿ ಸಂಸದ ನರೇಂದ್ರ ಸಾವೈಕರ್, ಮತ್ತಿತರರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next