Advertisement

ವಿದ್ಯುತ್ ಕಂಪೆನಿಗಳ ಸುಧಾರಣೆ: ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ ;ಸಿಎಂ ಸೂಚನೆ

07:59 PM Jun 27, 2022 | Team Udayavani |

ಬೆಂಗಳೂರು: ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳ ಕಾರ್ಯಕ್ಷಮತೆ ಹಾಗೂ ಹಣಕಾಸಿನ ಸಮರ್ಥನೀಯತೆಯ ಬಗ್ಗೆ ಮತ್ತು ಈ ಕಂಪೆನಿಗಳ ಸರ್ವತೋಮುಖ ಅಭಿವೃದ್ದಿಯ ಸಲುವಾಗಿ, ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಗುರುಚರಣ್ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿಯ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.

Advertisement

ಸಮಿತಿಯ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಗುರುಚರಣ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ವರದಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವರದಿಯ ಶಿಫಾರಸುಗಳ ಅನುಷ್ಠಾನದ ಸಂದರ್ಭದಲ್ಲಿ ಅವರ ಸಲಹೆ, ಮಾರ್ಗದರ್ಶನ ಪಡೆಯಲು ಅನುವಾಗುವಂತೆ ಸಮಿತಿಯ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ಈ ವರದಿಯಲ್ಲಿ ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳ ವಸ್ತುಸ್ಥಿತಿ, ಸುಧಾರಣೆಗಳ ಅಗತ್ಯತೆ ಮತ್ತು ಅನುಷ್ಠಾನ ಯೋಜನೆಯ ಬಗ್ಗೆ ಸವಿಸ್ಥಾರ ವಿವರಣೆಗಳನ್ನು ನೀಡುವುದರೊಂದಿಗೆ ರಚನಾತ್ಮಕ ಬದಲಾವಣೆ, ಮಧ್ಯಮ ಮತ್ತು ದೀರ್ಘಾವಧಿಯ ಸುಧಾರಣೆ, ಈ ಸುಧಾರಣೆಗಳ ಸಕಾಲಿಕ ಅನುಷ್ಠಾನದ ಬಗ್ಗೆ ನಿಖರವಾಗಿ ತಿಳಿಸಲಾಗಿದೆ.

ಈ ವರದಿಯಲ್ಲಿ ತಿಳಿಸಿರುವ ಸುಧಾರಣಾ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಕುರಿತು ವಿವರವಾಗಿ ಚರ್ಚಿಸಿ, ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಇಂಧನ ಸಚಿವ ವಿ.ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next