Advertisement

ವಶಿಷ್ಠ ಸೌಹಾರ್ದ ಸಹಕಾರ ಸಂಘದ ಠೇವಣಿದಾರರಿಗೆ 26.97 ಕೋಟಿ ರೂ. ಠೇವಣಿ ಹಣ ಮರುಪಾವತಿ: ಎಸ್.ಟಿ.ಸೋಮಶೇಖರ್

05:40 PM Dec 20, 2022 | Team Udayavani |

ಬೆಳಗಾವಿ: ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರದ ಕುರಿತು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ.  ವಿಶೇಷಾಧಿಕಾರಿಯ ಅವಧಿಯಲ್ಲಿ ಸಾಲ ವಸೂಲಾತಿಗೆ ಕ್ರಮವಹಿಸಿ 729 ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ 26.97 ಕೋಟಿ ರೂ. ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

Advertisement

ವಿಧಾನ ಪರಿಷತ್ ಸದಸ್ಯ ಯು.ಬಿ‌.ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಪರಿಷತ್ ನಲ್ಲಿ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರ ಪ್ರಕರಣದ ಸಿಐಡಿ ವಿಚಾರಣೆ ಪ್ರಗತಿಯಲ್ಲಿದೆ. ಠೇವಣಿದಾರರಿಗೆ ಠೇವಣಿ ಹಣ ಹಿಂದಿರುಗಿಸಲು ಸರ್ಕಾರದಿಂದ “ಸಕ್ಷಮ ಪ್ರಾಧಿಕಾರ” ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದರು.

2013-14ರಿಂದ 2014-15ನೇ ಸಾಲಿನವರೆಗಿನ ಲೆಕ್ಕಪತ್ರಗಳ ಮರು ಲೆಕ್ಕ ಪರಿಶೋಧನೆ ಪೂರ್ಣಗೊಳಿಸಿದ್ದು, ವರದಿ ಬಿಡುಗಡೆ ಬಾಕಿ ಇರುತ್ತದೆ. 2015-16ರಿಂದ 2019-20ರವರೆಗೆ ಮರು ಲೆಕ್ಕ ಪರಿಶೋಧನೆ ನಡೆಯುತ್ತಿರುತ್ತದೆ ಎಂದು ಮಾಹಿತಿ ನೀಡಿದರು.

ಅಂದಾಜು 2000 ಠೇವಣಿದಾರರಿಗೆ ಅಂದಾಜು 260 ಕೋಟಿ ರೂ. ಠೇವಣಿ ಹಣ ಪಾವತಿಸಬೇಕಾಗಿರುತ್ತದೆ. ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯು ಕೈಗೊಂಡಿರುವ ಪರಿವೀಕ್ಷಣಾ ವರದಿಯ ಪ್ರಕಾರ ಅಂದಾಜು 280 ಕೋಟಿ ರೂ. ಅವ್ಯವಹಾರವಾಗಿರುವುದು ಕಂಡುಬಂದಿರುತ್ತದೆ. ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next