Advertisement

ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆ ವ್ಯರ್ಥ ಪ್ರಯತ್ನ

09:18 AM Apr 15, 2017 | |

ಹುಬ್ಬಳ್ಳಿ: ಪ್ರಾದೇಶಿಕ ಪಕ್ಷಗಳು ಒಗ್ಗೂಡಿಕೊಂಡು ಚುನಾವಣೆ ಎದುರಿಸಿದರೆ ಬಿಜೆಪಿ ಗೆಲುವು ತಡೆಗಟ್ಟಲು ಸಾಧ್ಯವೆಂದು ಎನ್‌ಸಿಪಿ ಮುಖ್ಯಸ್ಥ ಶರದ ಪವಾರ ಹೇಳಿರುವುದು ಅವರ ಹುಚ್ಚು ಕಲ್ಪನೆ.ಇಂತಹ ಯತ್ನಗಳಿಂದ ಬಿಜೆಪಿ ಗೆಲುವು ತಡೆಯಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಅಭಿಪ್ರಾಯಪಟ್ಟರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಗೆಲುವಿನ ನಾಗಾಲೋಟ ತಡೆಯಬೇಕಾದರೆ ಪ್ರಾದೇಶಿಕ ಪಕ್ಷಗಳು ಒಗ್ಗೂಡಬೇಕೆಂಬ ಶರದ ಪವಾರ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಉತ್ತರ ಪ್ರದೇಶದಲ್ಲಿ ಇಂತಹುದೆ ಯತ್ನಕ್ಕೆ ಮುಂದಾಗಿ ಸಮಾಜವಾದಿ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದೆ ಎಂದರು.

ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ್ದು ಅಧಿಕಾರ ಮತ್ತು ಹಣದ ಗೆಲುವಾಗಿದೆ. ಇದು ಬಿಜೆಪಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೊಂದಿರುವ 150 ಸ್ಥಾನಗಳಲ್ಲಿ ಗೆಲ್ಲುವ ಗುರಿಗೆ ಯಾವುದೇ ಹಿನ್ನಡೆಯಾಗಲ್ಲ. ಉಪಚುನಾವಣೆಯ ಫಲಿತಾಂಶವನ್ನು ಅದಕ್ಕೆ ಪರಿಗಣಿಸಲಾಗದು. ಪಕ್ಷವು 150ಕ್ಕೂ ಅಧಿಕ ಸೀಟುಗಳನ್ನು ಜಯಿಸಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next