Advertisement

ISRO: ಯುವ ವಿಜ್ಞಾನಿ ಕಾರ್ಯಕ್ರಮಕ್ಕೆ 20ರಿಂದ ನೋಂದಣಿ ಆರಂಭ

09:19 PM Feb 15, 2024 | Team Udayavani |

ನವದೆಹಲಿ: ಶಾಲಾ ಮಕ್ಕಳಿಗಾಗಿ ಭಾರ ತೀಯ ಬಾಹ್ಯಾ ಕಾಶ ಸಂಶೋ ಧನಾ ಸಂಸ್ಥೆ (ಇಸ್ರೋ) ಆಯೋಜಿಸುತ್ತಿರುವ 2024ರ “ಯುವ ವಿಜ್ಞಾನಿ ಕಾರ್ಯಕ್ರಮ’ಕ್ಕೆ ಇದೇ 20ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಸ್ರೋ ಗುರುವಾರ ಹೇಳಿದೆ. ಯುವ ಜನರಿಗೆ ಬಾಹ್ಯಾಕಾಶ ತಂತ್ರಜ್ಞಾನ, ಬಾಹ್ಯಾಕಾಶ ವಿಜ್ಞಾನ ಮತ್ತು ಬಾಹ್ಯಾಕಾಶಕ್ಕೆ ಸಂಬಂಧಿಸಿದ ಅಪ್ಲಿಕೇಶನ್‌ಗಳ ಬಗ್ಗೆ ಸಾಮಾನ್ಯ ಜ್ಞಾನವನ್ನು ನೀಡುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.

Advertisement

ಈ ಬಗ್ಗೆ ಟ್ವೀಟ್‌ ಮಾಡಿರುವ ಇಸ್ರೋ, 2024ರ ಯುವ ವಿಜ್ಞಾನಿ ಕಾರ್ಯಕ್ರಮ ಘೋಷಣೆಯಾಗಿದೆ. ಭಾರತದಲ್ಲಿ 9ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರಾಗಿದ್ದಾರೆ. ಎರಡು ವಾರಗಳ ಕಾಲ ನಡೆಯುವ ಈ ಕಾರ್ಯಕ್ರಮದ ನೋಂದಣಿಗೆ ಮಾ.20 ಕೊನೆಯ ದಿನ ಎಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next