Advertisement

30 ರಿಂದ ಭತ್ತ ಖರೀದಿಗೆ ನೋಂದಣಿ ಆರಂಭ

04:17 PM Nov 15, 2020 | Suhan S |

ಯಾದಗಿರಿ: ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಜಿಲ್ಲೆಯಲ್ಲಿ ಐದು ನೋಂದಣಿ ಕೇಂದ್ರ ತೆರೆಯಲಾಗುತ್ತಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Advertisement

ಜಿಲ್ಲೆಯ ಯಾದಗಿರಿ, ಸುರಪುರ ಹಾಗೂ ಶಹಾಪುರದ ಎಂಪಿಎಂಸಿಗಳಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೇಡಿಕೆ ಮೇರೆಗೆ ಈ ಬಾರಿ ಹೆಚ್ಚುವರಿಯಾಗಿ ನಾಯ್ಕಲ್‌ ಹಾಗೂ ವಡಗೇರಾಗಳಲ್ಲಿ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ರೈತರು ನ. 30 ರಿಂದ ಡಿಸೆಂಬರ್‌ 30ರ ವರೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರಸ್ತುತ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ 1.10 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಆದೇಶಿಸಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜುನಿಗಮ ನಿಯಮಿತದಿಂದ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್‌ ಗೆ 1868 ರೂ. ಹಾಗೂ ಗ್ರೇಡ್‌ ಎ ಭತ್ತ ಪ್ರತಿ ಕ್ವಿಂಟಲ್‌ ಗೆ 1888 ರೂ. ಬೆಲೆಯಲ್ಲಿ ಖರೀದಿಸಲಾಗುವುದು. ಖರೀದಿಗೆ ಹಲವು ಮಾರ್ಗಸೂಚಿಗಳು ನಿಗದಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆ ಅನುಷ್ಠಾನಗೊಳಿಸಿ :

ಯಾದಗಿರಿ: ಜನ ಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರದಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಅವುಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದ ಅಧಿಕಾರಿಗಳು ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನರ ವೇತನ ಸೇರಿದಂತೆ ವಿವಿಧ ಯೋಜನೆಗಳಡಿ ಸರ್ಕಾರ ಅರ್ಹರಿಗೆ ಪ್ರತಿ ತಿಂಗಳು ಪಿಂಚಣಿ ನೀಡುತ್ತಿದೆ. ಈ ಯೋಜನೆಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಬೇಕು. ಯಾವುದೇ ವಿಳಂಬಕ್ಕೆ ಆಸ್ಪದ ನೀಡದಂತೆ ಅರ್ಹರಿಗೆ ಸರ್ಕಾರದ ಸೌಲಭ್ಯ ತಲುಪಿಸುವಂತೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌, ತಹಶೀಲ್ದಾರರು, ಕಂದಾಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next