Advertisement
ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ವಾಹನದಲ್ಲಿ ನಂಬರ್ ಪ್ಲೇಟ್ ಪ್ರದರ್ಶನಗೊಳ್ಳುವಂತೆ ನೋಡಿಕೊಂಡಿದ್ದಾರೆ. ಪ್ರಧಾನಿ ಕಾರಿಗೆ ಈಗಾಗಲೇ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ.ಸದ್ಯ ಈ ಗಣ್ಯರ ವಾಹನಗಳ ಮೇಲೆ ಹಾಗೂ ಇವರ ಬೆಂಗಾವಲು ಪಡೆಯಲ್ಲಿರುವ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಪ್ರದರ್ಶಿಸುವುದಿಲ್ಲ. ಬದಲಿಗೆ ನಂಬರ್ ಪ್ಲೇಟ್ ಅಳವಡಿಸುವ ಸ್ಥಳದಲ್ಲಿ ಅಶೋಕ ಸ್ತಂಭ ಚಿಹ್ನೆ ಇರುತ್ತದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಇತ್ತೀಚೆಗೆ ದೂರೊಂದು ದಾಖಲಾಗಿತ್ತು. ನಂಬರ್ ಪ್ಲೇಟ್ ಪ್ರದರ್ಶಿಸದಿರುವ ಈ ಕ್ರಮ 1988ರ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ವಾದಿಸಲಾಗಿತ್ತು. ಈ ಕುರಿತು ನ್ಯಾಯಾಲಯವು ಕೇಂದ್ರ ಸರಕಾರದ ಪ್ರತಿಕ್ರಿಯೆ ಕೋರಿತ್ತು. ಈ ಹಿನ್ನೆಲೆಯಲ್ಲಿ ಜನವರಿ 2 ರಂದೇ ಸಂಬಂಧಿತ ಇಲಾಖೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ.