Advertisement

ಇ-ಶ್ರಮ್‌ ಸೌಲಭ್ಯಕ್ಕಾಗಿ ನೋಂದಣಿ ಅಗತ್ಯ

03:34 PM Nov 22, 2022 | Team Udayavani |

ಚಿಕ್ಕಬಳ್ಳಾಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಿಂದ ವಂಚಿತರಾಗು ತ್ತಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದೇ ಸೂರಿನಡಿ ಹಲವು ಅವಕಾಶ ಕಲ್ಪಿಸುವ ಇ-ಶ್ರಮ್‌ ಯೋಜನೆಯಡಿ ನೋಂದಣಿ ಕುರಿತು ಜಿಲ್ಲಾದ್ಯಂತ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಹಿರಿಯ ಸಿವಿಲ್‌ ನ್ಯಾಯಾಧೀಶ ಲಕ್ಷ್ಮೀ ಕಾಂತ್‌ ಜೆ.ಮಿಸ್ಕಿನ್‌ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್‌. ತಿಪ್ಪೇಸ್ವಾಮಿ ಚಾಲನೆ ನೀಡಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್‌. ತಿಪ್ಪೇ ಸ್ವಾಮಿ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನೋಂದಣಿಯಾಗುವ ವಿಧಾನ ಮತ್ತು ಸೌಲಭ್ಯಗಳ ಬಗ್ಗೆ ಹಾಗೂ ಇ-ಶ್ರಮ್‌ ಯೋಜನೆಯ ಬಗ್ಗೆ ಜಿಲ್ಲಾದ್ಯಂತ 14 ದಿನಗಳ ಕಾಲ ವಾಹನವು ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.

ಅರ್ಹ ಅಸಂಘಟಿತ ಕಾರ್ಮಿಕರು ಇ- ಶ್ರಮ್‌ ಯೋಜನೆಯಡಿ ಇಎಸ್‌ಐ ಮತ್ತು ಪಿ.ಎಫ್‌ ಸದಸ್ಯರಾಗಿರದ ಹಾಗೂ ಆದಾಯ ತೆರಿಗೆ ಪಾವತಿಸದ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಇತರೆ ವರ್ಗಗಳ ಅಸಂಘಟಿತ ಕಾರ್ಮಿಕರು ಕಾಮನ್‌ ಸರ್ವೀಸ್‌ ಸೆಂಟರ್‌ (ಸಿಎಸ್‌ಸಿ) ಮೂಲಕ ಅಥವಾ ಆನ್‌ಲೈನ್‌ನಲ್ಲಿ ಸ್ವಯಂ ನೋಂದಣಿ ಆಗಬಹುದು ಹೀಗಾಗಿ ನೋಂದಣಿ ಮಾಡಿಕೊಳ್ಳಿ ಎಂದರು.

ಕಾರ್ಮಿಕ ಅಧಿಕಾರಿ ಆರ್‌. ವರಲಕ್ಷ್ಮೀ ಮಾತನಾಡಿ, ಇ-ಶ್ರಮ್‌ ಯೋಜನೆಯಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿ ಕರು, ಚಾಲಕರು, ದರ್ಜಿಗಳು, ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿ ಕಾರ್ಯಕರ್ತೆ ಯರು, ರಿಕ್ಷಾ ಎಳೆಯುವವರು, ಬಿಸಿ ಊಟ ಕಾರ್ಮಿಕರು, ನರೇಗಾ ಕಾರ್ಮಿಕರು, ಇಟ್ಟಿಗೆ ಮಾಡುವವರು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 156 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು ಇತರೆ ವರ್ಗಗಳಡಿ ನೋಂದಣಿಯಾಗಿ ಯೋಜನೆಯ ಸೌಲಭ್ಯ ಗಳನ್ನು ಪಡೆದುಕೊಳ್ಳಬೇಕು ಎಂದರು.

ಇ-ಶ್ರಮ್‌ ನೊಂದಣಿ ಉಚಿತವಾಗಿದ್ದು, ಇ-ಶ್ರಮ್‌ ಪೋರ್ಟಲ್‌ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು ಅಥವಾ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳು (ಸಿಎಸ್‌ಸಿ) ಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಇ-ಶ್ರಮ್‌ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ನೊಂದಣಿ ಮಾಡಿಸಿ, ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆಯಬಹದು ಎಂದರು.

Advertisement

ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರು, ಅಸಂಘಟಿತ ಕಾರ್ಮಿಕರ ಸಂಘ ಸಂಸ್ಥೆಯ ಪದಾಧಿಕಾರಿಗಳು, ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ಪ್ರಯೋಜನಗಳು: ಸಾಮಾಜಿಕ ಭದ್ರತೆ ಮತ್ತು ಹಾಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುಕೂಲ. ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ. ಇ-ಶ್ರಮ್‌ನಲ್ಲಿ ನೊಂದಾಯಿಸಿಕೊಂಡರೆ ಅಪಘಾತ ದಿಂದ ಮರಣ ಹೊಂದಿದ್ದಲ್ಲಿ ಅಥವಾ ಶಾಶ್ವತ ಅಂಗವೈಕಲ್ಯ ಹೊಂದಿದಲ್ಲಿ 2 ಲಕ್ಷ ರೂ. ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ. 1 ಲಕ್ಷ ರೂ ಪರಿಹಾರ ಪಡೆಯ ಬಹುದಾಗಿದೆ. ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್‌ ಸಂದರ್ಭದಲ್ಲಿ ಅರ್ಹ ಕಾರ್ಮಿಕರಿಗೆ ನೆರವು ಸಿಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next