Advertisement
ಸದಾಶಿವ ನಗರದ ತಮ್ಮ ನಿವಾಸದ ಎದುರು ಶನಿವಾರ ಎಬಿವಿಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಯುವತಿ ಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಎಬಿವಿಪಿ ಮತ್ತು ಬಿಜೆಪಿಗೆ ಗೊತ್ತಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ಸಿಎಂ, ಡಿಸಿಎಂ ಸಹಿತ ನನಗೂ ಜವಾಬ್ದಾರಿ ಇದೆ. ಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ನಮಗೆ ಬಂದಿರುವ ವರದಿಯನ್ನು ನಾವು ತಿಳಿಸಿದ್ದೇವಷ್ಟೇ. ಪ್ರಕರಣದ ಕುರಿತು ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದರು.
ಇದೇ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ್, ವಿದ್ಯಾರ್ಥಿನಿ ನೇಹಾ ಕೊಲೆ ಕೃತ್ಯ ಅತ್ಯಂತ ಬರ್ಬರ ಘಟನೆ. ಈ ಹೇಯ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ಇಂತಹ ದುಷ್ಕೃತ್ಯ ಎಸಗಿದವರಿಗೆ ತತ್‌ಕ್ಷಣ ಕಠಿನ ಶಿಕ್ಷೆ ಆಗಬೇಕು. ವಿಚಾರಣೆ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ತಿಳಿಸಿದ್ದಾರೆ. ಇಂತಹ ಘಟನೆಯನ್ನು ಯಾರೇ ಮಾಡಿದರೂ ಖಂಡನಾರ್ಹ. ಇದೊಂದು ಬರ್ಬರ ಕೃತ್ಯವಾಗಿದ್ದು ಯಾವ ದೃಷ್ಟಿಯಿಂದಲೂ ಇದನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ಘಟನೆಯ ಆರೋಪಿಗೆ ಕಠಿನ ಶಿಕ್ಷೆಯಾಗುವಂತೆ ಸರಕಾರ ನೋಡಿಕೊಳ್ಳಲಿದೆ.ಇಂತಹ ಘೋರಕೃತ್ಯ ಎಸಗಿದವರನ್ನು ವಿಳಂಬವಿಲ್ಲದೆ ಗಲ್ಲು ಶಿಕ್ಷೆಗೆ ಒಳಪಡಿಸಲು ಸಾಧ್ಯವಾಗುವಂತಹ ಕಾನೂನು ರೂಪಿಸುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಾಲೋಚನೆ ನಡೆಸಬೇಕು ಎಂದರು.
Related Articles
Advertisement