ಬಂಟ್ವಾಳ: ಎಂಡೋಸಲ್ಫಾನ್ ಪುನರ್ವಸತಿ ಕಾರ್ಯಕ್ರಮದಡಿ ಎಂಡೋ ಸಂತ್ರಸ್ತರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ನಾಲ್ಕು ಸಂಚಾರಿ ಆರೋಗ್ಯ ಘಟಕಗಳ ಸೇವೆಯನ್ನು ಸೋಮವಾರ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಬಿ.ಸಿ. ರೋಡಿನಲ್ಲಿ ಚಾಲನೆ ನೀಡಿದರು.
ಈ ಘಟಕವು ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯದ ಬೆಳ್ಳಾರೆ ಮತ್ತು ವಿಟ್ಲ-ಮೂಡಬಿದಿರೆಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸಲಿದೆ. ಘಟಕದಲ್ಲಿ ಫಿಸಿಯೋಥೆರಪಿಸ್ಟ್, ಶುಶ್ರೂಷಕಿ, ಸಹಾಯಕರನ್ನೊಳಗೊಂಡ ತಂಡ ಇರುತ್ತದೆ. ತಿಂಗಳಲ್ಲಿ ಎರಡು ಬಾರಿ ಎಂಡೋಸಲ್ಫಾನ್ ಸಂತ್ರಸ್ತರ ಮನೆಗೆ ಭೇಟಿ ನೀಡಿ ಚಿಕಿತ್ಸೆ ನೀಡಲಿದೆ ಎಂದು ಸಚಿವ ರಮಾನಾಥ ರೈ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಸರ್ವ ಶಿಕ್ಷಣ ಅಭಿಯಾನದಡಿ ಅಂಗವಿಕಲ ಫಲಾನುಧಿಭವಿಗಳಿಗೆ ಗಾಲಿಕುರ್ಚಿ ಸಹಿತ ವಿವಿಧ ಸಲಕರಣೆಗಳನ್ನು ಸಚಿವರು ವಿತರಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಆರೋಗ್ಯ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ಎಂ.ಎಸ್. ಮುಹಮ್ಮದ್, ರವೀಂದ್ರ ಕಂಬಳಿ, ಮಂಜುಳಾ ಮಾವೆ, ಕಮಲಾಕ್ಷಿ ಪೂಜಾರಿ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್, ಡಾ| ಅರುಣ್ ಕುಮಾರ್, ತಹಶೀಲ್ದಾರ್ ಪುರಂದರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಸ್ವಾಗತಿಸಿ ವಂದಿಸಿದರು.