Advertisement

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ, ಫೈರಿಂಗ್ ಮಾಡಿ ಇಬ್ಬರ ಬಂಧನ

01:45 PM Jun 25, 2021 | Team Udayavani |

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನ ಸಮಯದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಘಟನೆಯೂ ನಡೆಯಿತು.

Advertisement

ರೇಖಾ ಪತಿ ಕದಿರೇಶ್ ಸಂಬಂಧಿಗಳಾದ ಪೀಟರ್ ಮತ್ತು ಸೂರ್ಯ ಬಂಧಿತ ಆರೋಪಿಗಳು. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಳೆ ಹಲ್ಲೆಗೆ ಮುಂದಾಗಿದ್ದಾರೆ. ಓರ್ವ ಪಿಎಸ್ ಐ ಹಾಗು ಓರ್ವ ಕಾನ್ ಸ್ಟೇಬಲ್ ಮೆಲೆ ಹಲ್ಲೆ ಮಾಡಿದ್ದಾರೆ. ಹೀಗಾಗಿ ಇನ್ಸ್ ಪೆಕ್ಟರ್ ಶಿವಸ್ವಾಮಿ ಮತ್ತು ಕಾಟನ್ ಪೇಟೆ ಇನ್ಸ್ ಪೆಕ್ಟರ್ ಚಿದಾನಂದ್ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ: ಗುರುವಾರ ಬೆಳಗ್ಗೆ 10.10ರ ಸುಮಾರಿಗೆ ಮನೆಯಿಂದ ಸುಮಾರು ನೂರು ಮೀಟರ್‌ ದೂರದಲ್ಲಿರುವ ಕಚೇರಿಯಲ್ಲಿ ರೇಖಾ ಕದಿರೇಶ್ ಅವರು ಎಂದಿನಂತೆ ಬಡವರಿಗೆ ಊಟ ವಿತರಿಸಿ ಮನೆಗೆ ಹಿಂದಿರುಗುತ್ತಿದ್ದರು. ಬೈಕ್‌ ನಲ್ಲಿ ಬಂದ ಇಬ್ಬರು ಆಗಂತುಕರು ರೇಖಾ ಅವರ ಹೊಟ್ಟೆ ಸೇರಿ ದೇಹದ ವಿವಿಧೆಡೆ 15ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿದ್ದಾರೆ.

ಇದನ್ನೂ ಓದಿ:ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Advertisement

ಮೂರು ವರ್ಷಗಳ ಹಿಂದೆ ಛಲವಾದಿಪಾಳ್ಯ ವಾರ್ಡ್‌ನ ಮುನೇಶ್ವರ ದೇವಾಲಯದ ಬಳಿ ಕದಿರೇಶ್‌ ಅವರನ್ನು ಹತ್ಯೆಗೈದ ಮಾದರಿಯಲ್ಲೇ ಅವರ ಪತ್ನಿ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿದೆ.

ಪ್ರಕರಣದಲ್ಲಿ ಬಂಧನವಾಗಿರುವ ಪೀಟರ್‌ ಈ ಮೊದಲು 2018ರಲ್ಲಿ ಕೊಲೆಯಾದ ಕದಿರೇಶ್‌ ಹತ್ಯೆಯ ಮಾಸ್ಟರ್‌ ಮೈಂಡ್‌ ಶೋಭನ್‌ ಗ್ಯಾಂಗ್‌ ನಲ್ಲಿ ಗುರುತಿಸಿಕೊಂಡಿದ್ದ. ಆದರೂ ಕದಿರೇಶ್‌ ತನ್ನಸಂಬಂಧಿ ಯುವತಿಯನ್ನು ಪೀಟರ್‌ ಜತೆ ಮದುವೆ ಮಾಡಿಸಿದ್ದ. ಬಳಿಕ ಎಲ್ಲರೂ ಚೆನ್ನಾಗಿದ್ದರು. ಈ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಕದಿರೇಶ್‌ ಪೀಟರ್‌ ಗೆ ಗಾರ್ಬೆಜ್‌ ಬಿಲ್‌ವೊಂದನ್ನು ಪೀಟರ್‌ಗೆ ಮಾಡಿಕೊಟ್ಟಿದ್ದ. ಆದರೆ, ಕದಿರೇಶ್‌ ಕೊಲೆಯಾದ ಬಳಿಕ ರೇಖಾ ಅದನ್ನು ತಡೆ ಹಿಡಿದಿದ್ದರು. ಆದರೂ ಆಕೆಯ ಜತೆ ಇದ್ದು ಪ್ರತಿಯೊಂದು ಕೆಲಸವನ್ನು ಪೀಟರ್‌ ನಿರ್ವಹಿಸುತ್ತಿದ್ದ.

ಹೊಸ ಮನೆ ನಿರ್ಮಾಣಕ್ಕೆ ಹಣ ಕೊಡುವುದಾಗಿ ಹೇಳಿದ್ದ ರೇಖಾ ಅದಕ್ಕೂ ಸಹಾಯ ಮಾಡಿರಲಿಲ್ಲ. ಅದರಿಂದ ಬೇಸತ್ತಿದ್ದ ಪೀಟರ್‌, ರೇಖಾ ವಿರುದ್ಧ ಅಸಮಾಧಾನಗೊಂಡಿದ್ದ ಎನ್ನಲಾಗಿದೆ.

ಮತ್ತೋರ್ವ ಆರೋಪಿ ಸೂರ್ಯ ಕೂಡ ಕದಿರೇಶ್‌ ಸಂಬಂಧಿಯಾಗಿದ್ದು, ಅವರ ವಿರುದ್ಧ ಕಾಟನ್‌ಪೇಟೆಯಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿದೆ. ಸಂಬಂಧಿಗಳಾಗಿದ್ದರೂ ಕದಿರೇಶ್‌ ಸಂಬಂಧಿಗಳಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿರಲಿಲ್ಲ. ರೇಖಾ ಬಳಿ ಕೇಳಿಕೊಂಡಿದ್ದರೂ ಆಕೆಯೂ ಯಾವುದೇ ನೆರವು ನೀಡಿರಲಿಲ್ಲ. ಅದರಿಂದ ಆಕ್ರೋಶಗೊಂಡಿದ್ದ ಇವರುಗಳು ರೇಖಾ ಅವರ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾವಹಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next