Advertisement
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ , ವಿಎಚ್ ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದು ಟ್ವೀಟ್ ನಲ್ಲಿ ಒತ್ತಾಯಿಸಿದ್ದಾರೆ.
Related Articles
Advertisement
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ? ಎಂದು ಪ್ರಶ್ನಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮುಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು, ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿ ಅವರ ಕರ್ತವ್ಯವಾಗಿದೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್.ಎಸ್.ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ. ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.