ಚಿಕ್ಕಮಗಳೂರು: ಮನೆಗೆ ರಸ್ತೆ ಸಂಪರ್ಕವಿಲ್ಲದ ಕಾರಣ ವೃದ್ಧೆಯೊಬ್ಬರನ್ನು ಸಂಬಂಧಿಕರು ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಅನಾರೋಗ್ಯ ಪೀಡಿತ ವೃದ್ದೆಯನ್ನು ಆಸ್ಪತ್ರೆಗೆ ಸೇರಿಸಲು ಸಂಬಂಧಿಕರು ಈ ರೀತಿ ಮಾಡಿದ್ದಾರೆ.
ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದ 85 ವರ್ಷದ ಪ್ರಾಯದ ವೆಂಕಮ್ಮ ಅವರ ಮನೆಗೆ ರಸ್ತೆ ಸಂಪರ್ಕದ ಸೌಲಭ್ಯವಿಲ್ಲ. ಹೀಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲೆಂದು ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಜೋಳಿಗೆಯಲ್ಲಿ ಹೊತ್ತುಕೊಂಡು ಬರಲಾಗಿದೆ.
ಸುತ್ತ ಜಮೀನು, ಮಧ್ಯದಲ್ಲಿರುವ ಮನೆ ಹೊಂದಿರುವ ವೆಂಕಮ್ಮ ಅವರದ್ದು ಭೂ ಸ್ವಾಧೀನ ಕಾಯ್ದೆ ಅಡಿಯಲ್ಲಿ ಮಂಜೂರಾಗಿದ್ದ ಜಮೀನು. 2021ರಲ್ಲಿಯೇ ‘ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ’ ಎಂದು ಅವರು ಮನವಿ ಮಾಡಿದ್ದರು. ಸಚಿವ ಆರ್ ಆಶೋಕ್, ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿದ್ದರು. ಆದರೆ ಇದುವರೆಗೂ ಏನೂ ಕ್ರಮ ಕೈಗೊಳ್ಳದ ಕಾರಣ ಅನಾರೋಗ್ಯ ಪೀಡಿತರಾದ ಅವರನ್ನು ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ.
ಇದನ್ನೂ ಓದಿ:ಬಂಟರ ಕಾರ್ಯಕ್ರಮಗಳಿಗೆ ನನ್ನನ್ನು ಕರೆಯಲು ಮರೆಯಬೇಡಿ: ಡಿಸಿಎಂ ಫಡ್ನವೀಸ್
ಮನವಿ ಮಾಡಿದರೂ ಸ್ಪಂದಿಸದ ಸರ್ಕಾರ, ಜಿಲ್ಲಾಡಳಿತ ವಿರುದ್ದ ಸ್ಥಳೀಯರು ಅಸಮಾಧಾನ ತೋಡಿಕೊಂಡಿದ್ದಾರೆ.