Advertisement

ಹೊರಬಂದ “ಕವಚ’ಟ್ರೈಲರ್: ಜನರಿಂದ ಮೆಚ್ಚುಗೆ ಸೂಪರ್: Watch

03:38 PM Dec 22, 2018 | Team Udayavani |

“ದಿ ವಿಲನ್’ ಚಿತ್ರದ ನಂತರ ಶಿವರಾಜಕುಮಾರ್ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದು, ಇದೀಗ ಶಿವಣ್ಣನ ವೃತ್ತಿ ಜೀವನದ ವಿಭಿನ್ನ ಚಿತ್ರ ಎಂದೇ ಹೇಳಲಾಗುತ್ತಿರುವ “ಕವಚ’ ಚಿತ್ರದ ಟ್ರೈಲರ್ ಹೊರಬಂದಿದೆ. ಟ್ರೈಲರ್ ನಲ್ಲಿ ಶಿವಣ್ಣ ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಕುತೂಹಲ ಕೆರಳಿಸಿದ್ದಾರೆ. ಆಕರ್ಷಕವಾಗಿ ಮೂಡಿ ಬಂದಿರುವ ಟ್ರೈಲರ್ ಕ್ರೈಮ್ ಕಥೆಯನ್ನು ಬಿಂಬಿಸುತ್ತೆ.

Advertisement

ಶಿವಣ್ಣ ಅಂಧನಾಗಿಯೂ ಆಕ್ಷನ್ ದೃಶ್ಯಗಳಲ್ಲಿ ಮಿಂಚಿದ್ದಾರೆ. ಈ ಚಿತ್ರವು ಮಲಯಾಳಂನ “ಒಪ್ಪಂ’ ಚಿತ್ರದ ರೀಮೇಕು. ಮಲಯಾಳಂ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ನಟಿಸಿರುವ ಈ ಚಿತ್ರದ ಕನ್ನಡ ಅವತರಣಿಕೆಯಲ್ಲಿ ಇದೀಗ ಶಿವರಾಜಕುಮಾರ್‌ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಎಚ್‌.ಎಂ.ಎ ಸಿನಿಮಾನಡಿ ಎಂ.ವಿ.ವಿ. ಸತ್ಯನಾರಾಯಣ ಮತ್ತು ಎ. ಸಂಪತ್‌ ಕುಮಾರ್‌ ನಿರ್ಮಿಸುತ್ತಿದ್ದಾರೆ.

ಇನ್ನು ಜಿ.ವಿ.ಆರ್‌. ವಾಸು ಈ ಚಿತ್ರದ ನಿರ್ದೇಶಕರು. “ಕವಚ’ ಚಿತ್ರವು ತೆರೆಗೆ ಬರಲು ಸಜ್ಜಾಗಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್‌ ಅವರ ಜೊತೆಗೆ ಇಶಾ ಕೊಪ್ಪಿಕರ್‌, ರವಿ ಕಾಳೆ, ತಬಲಾ ನಾಣಿ, ವಸಿಷ್ಠ ಸಿಂಹ, ಸುಧಾ ಬೆಳವಾಡಿ, ಜಯಪ್ರಕಾಶ್‌, ಲಯೇಂದ್ರ ಮುಂತಾದವರು ನಟಿಸುತ್ತಿದ್ದಾರೆ. ರಾಹುಲ್‌ ಶ್ರೀವಾತ್ಸವ್‌ ಅವರ ಛಾಯಾಗ್ರಹಣ ಮತ್ತು ಅರ್ಜುನ್‌ ಜನ್ಯ ಅವರ ಸಂಗೀತ ಚಿತ್ರಕ್ಕಿದೆ. 

Advertisement

Udayavani is now on Telegram. Click here to join our channel and stay updated with the latest news.

Next