Advertisement

ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಾಕಿ ಮಾಸಿಕ ಗೌರವಧನ ತಕ್ಷಣ ನೀಡಲು ಎಚ್ ಡಿಕೆ ಆಗ್ರಹ

03:31 PM Oct 11, 2020 | keerthan |

ಬೆಂಗಳೂರು: ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಾಕಿಯಿರುವ ಮಾಸಿಕ ಗೌರವಧನ ತಕ್ಷಣ ನೀಡಬೇಕು, ಮತ್ತು ಈ ಗೌರವಧನವನ್ನು ಕನಿಷ್ಠ ಐದು ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ,

Advertisement

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಸರ್ಕಾರ ಭರವಸೆ ನೀಡಿದ್ದಂತೆ ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್ ಡೌನ್ ಸಂದರ್ಭದಲ್ಲಿ ತಡೆಹಿಡಿದಿದ್ದ ಗೌರವ ಧನದ ಬಾಕಿಯನ್ನು ತಕ್ಷಣವೇ ನೀಡಬೇಕು ಎಂದಿದ್ದಾರೆ.

ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ 15 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದ 14 ವಿಧಾನಪರಿಷತ್ ಸದಸ್ಯರುಗಳಿಗೆ ನೀಡಿದ್ದ ಭರವಸೆಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕು. ಸುಮಾರು ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿ ಸರ್ಕಾರ 15000 ರೂ.ಗಳ ಮಾಸಿಕ ಗೌರವಧನ  ನೀಡುವ  ಭರವಸೆಯನ್ನು ಕೂಡಲೇ ಜಾರಿ ಮಾಡಬೇಕು ಎಂದಿದ್ದಾರೆ.

ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು ಎಂದು ಎಚ್ ಡಿಕೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next