Advertisement

ಕೇಂದ್ರ ಸರಕಾರದ ಜನಪರ ಯೋಜನೆಗಳ ಪುಸ್ತಕ ಬಿಡುಗಡೆ

06:31 PM Aug 21, 2022 | Team Udayavani |

ಬೆಂಗಳೂರು: ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಜನಪರ ಯೋಜನೆಗಳ ವಿವರವನ್ನು ಒಳಗೊಂಡಿರುವ “ನವ ಭಾರತಕ್ಕಾಗಿ ಹೊಸ ಯೋಜನೆಗಳು” “ನ್ಯೂ ಸ್ಕೀಮ್ಸ್ ಫಾರ್ ನ್ಯೂ ಇಂಡಿಯಾ” ಪುಸ್ತಕಗಳನ್ನು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಡುಗಡೆಗೊಳಿಸಿದರು.

Advertisement

ಕೇಂದ್ರದ ಜನಪರ ಯೋಜನೆಗಳ ಮಾಹಿತಿಯುಳ್ಳ ಈ ಪುಸ್ತಕದ ಮೂಲಕ ಜನರನ್ನು ಮತ್ತು ಇನ್ನಷ್ಟು ಫಲಾನುಭವಿಗಳನ್ನು ತಲುಪುವಂತಾಗಲಿ ಎಂದು ನಳಿನ್ ಕುಮಾರ್ ಕಟೀಲ್ ಅವರು ಹಾರೈಸಿದರು.

ಕೇಂದ್ರ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಲುಪಲು ಇದು ಪೂರಕ. ಪ್ರಧಾನಿಯವರ ಪ್ರತಿಯೊಬ್ಬರ ಸಶಕ್ತೀಕರಣದ ಕನಸು ನನಸಾಗಲು ಇದು ಸಹಾಯಕ ಎಂದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರರಿಂದ ಮಾಹಿತಿ ಪಡೆದು ಈ ಪುಸ್ತಕವನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಹೊರತರಲಾಗಿದೆ. ಈ ಪುಸ್ತಕವು ವಿವಿಧ ಯೋಜನೆಗಳ ಅರ್ಹತಾ ಮಾನದಂಡಗಳು ಮತ್ತು ಅರ್ಜಿಯ ಕಾರ್ಯವಿಧಾನವನ್ನು ಒಳಗೊಂಡಂತೆ ಎಲ್ಲ ಯೋಜನೆಗಳ ವಿವರಗಳನ್ನು ಒಳಗೊಂಡಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಉಜ್ವಲಾ, ಉಜಾಲಾ, ಮುದ್ರಾ, ಸ್ಕಿಲ್ ಇಂಡಿಯಾ, ಜನ ಔಷಧಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಸ್ವಚ್ಛ ಭಾರತ್, ಮೇಕ್ ಇನ್ ಇಂಡಿಯಾ, ಸುರಕ್ಷಿತ ಮಾತೃತ್ವ, ಬೇಟಿ-ಬಚಾವೋ ಬೇಟಿ-ಪಡಾವೋ, ಡಿಜಿಟಲ್ ಇಂಡಿಯಾ, ಖೇಲೋ ಸೇರಿದಂತೆ ಕೆಲವು ಪ್ರಮುಖ ಯೋಜನೆಗಳ ಮಾಹಿತಿ ಇದರಲ್ಲಿದೆ.

ಸುಕನ್ಯಾ ಸಮೃದ್ಧಿ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ ಯೋಜನೆ, ಸಮರ್ಥ ಯೋಜನೆ, ರಾಷ್ಟ್ರೀಯ ವಯೋಶ್ರೀ ಯೋಜನೆ, ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ, ಪ್ರಧಾನ ಮಂತ್ರಿ ಕೃಷಿ ಕಲ್ಯಾಣ ಅಭಿಯಾನ, ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ ಸೇರಿದಂತೆ 100 ಕ್ಕೂ ಹೆಚ್ಚು ಯೋಜನೆಗಳ ವಿವರವಿದ್ದು, ಸಮಾಜದ ಪ್ರತಿಯಿಂದು ವರ್ಗಕ್ಕೆ ತಲುಪಲು ಇದು ನೆರವಾಗಲಿದೆ ಎಂದು ವಿವರಿಸಿದರು.

Advertisement

ಸ್ಕೀಮ್ ವೆಬ್ ಪುಟಗಳಿಗಾಗಿ ಕ್ಯೂಆರ್ ಕೋಡ್‍ಗಳನ್ನು ನೀಡಲಾಗಿದೆ. ಸ್ಕ್ಯಾನ್ ಮಾಡುವ ಮೂಲಕ ನೇರವಾಗಿ ಆಯಾ ವೆಬ್ ಪುಟಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಸ್ಕೀಮ್ ಮಾಹಿತಿಯನ್ನು ಪಡೆಯಬಹುದು ಎಂದು ಪ್ರಕಾಶಕರು ತಿಳಿಸಿದ್ದಾರೆ.

ಬೀದರ್ ಉತ್ತರ ಕ್ಷೇತ್ರದಲ್ಲಿ ಇದರ ಪ್ರತಿಯನ್ನು ಮನೆ ಮನೆಗೆ ತಲುಪಿಸಿ ಸರ್ಕಾರದ ಯೋಜನೆಗಳ ಬಗ್ಗೆ ತಿಳಿವಳಿಕೆ ನೀಡುವ ಮತ್ತು ಅರ್ಹ ಫಲಾನುಭವಿಗಳನ್ನು ಅವರ ಮನೆ ಬಾಗಿಲಿಗೆ ದಾಖಲಿಸುವ ಕೆಲಸ ಮಾಡಲಾಗುತ್ತಿದೆ. ನಾವು ಇಲ್ಲಿಯವರೆಗೆ 50 ಕ್ಕೂ ಹೆಚ್ಚು ಗ್ರಾಮಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ಸುಮಾರು 20,000 ಕ್ಕೂ ಹೆಚ್ಚು ಮನೆಗಳಿಗೆ ಬಿಜೆಪಿ ಕಾರ್ಯಕರ್ತರು, ಹಿತೈಷಿಗಳು, ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್‍ನ ಕುಟುಂಬ ಸದಸ್ಯರು ಭೇಟಿ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಪಕ್ಷದ ಹಾಸನ ಜಿಲ್ಲಾಧ್ಯಕ್ಷ ಹುಲ್ಲಳ್ಳಿ ಸುರೇಶ್, ಸಕಲೇಶಪುರದ ಮುಖಂಡ ನಾರ್ವೆ ಸೋಮಶೇಖರ್, ಮುಖಂಡರಾದ ಲಲ್ಲೇಶ್ ರೆಡ್ಡಿ, ನರೇಂದ್ರಬಾಬು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next