Advertisement
ಈ ಸಂರರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಎಂ. ಬಸವರಾಜ್, ಮಹಾರಾಷ್ಟ್ರದಿಂದ ತಾಲೂಕಿನ ರಾಂಪುರ ಗ್ರಾಮಕ್ಕೆ ಬಂದಿದ್ದ ಒಂದೇ ಕುಟುಂಬದ ಗಂಡ, ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಆರ್.ಎಂ.ಎಸ್.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ನಂತರದ ದಿನಗಳಲ್ಲಿ ಮಹಾರಾಷ್ಟ್ರದ ಪೂನಾದಿಂದ ಪಟ್ಟಣಕ್ಕೆ ಆಗಮಿಸಿದ್ದ 19 ವರ್ಷದ ಯುವಕನನ್ನು ಕೂಡ ಇಲ್ಲಿಯೇ ಕ್ವಾರಂಟೈನ್ ಮಾಡಲಾಗಿತ್ತು. ಈ ಐವರ ಗಂಟಲು ಮಾದರಿಯನ್ನು ಲ್ಯಾಬ್‌ಗ ಕಳುಹಿಸಲಾಗಿತ್ತು. ನೆಗೆಟಿವ್ ಎಂದು ವರದಿ ಬಂದಿರುವುದರಿಂದ ಹಾಗೂ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಅವಧಿ ಮುಗಿದಿರುವುದರಿಂದ ಸಾಂಸ್ಥಿಕ ಕ್ವಾರಂಟೈನ್ ನಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
Advertisement
ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಐದು ಜನರ ಬಿಡುಗಡೆ
07:59 AM Jun 22, 2020 | Suhan S |
Advertisement
Udayavani is now on Telegram. Click here to join our channel and stay updated with the latest news.