Advertisement
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯಕ್ಕೆ ಅಗತ್ಯವಾದ ಆಹಾರ ಧಾನ್ಯ ಪೂರೈಕೆ ಮಾಡಲಾಗಿದ್ದು, ರಾಜ್ಯದ ಎಲ್ಲ ಬಿಪಿಎಲ್ ಕಾರ್ಡ್‌ದಾರ ರಿಗೆ ಆಹಾರ ಧಾನ್ಯ ಸಿಗಲಿದೆ.ಸುಮಾರು ನಾಲ್ಕು ಕೋಟಿ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ.ರಾಜ್ಯದಲ್ಲಿರುವ ಭಾರತೀಯ ಆಹಾರ ನಿಗಮದ 71 ಗೋದಾಮು ಗಳಿಗೆ ಆಹಾರ ಧಾನ್ಯ ತಲುಪಿಸಲಾಗಿದ್ದು, ಜತೆಗೆ ಸಮಯದಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ಅಕ್ಕಿ ಮತ್ತು ಗೋಧಿಯನ್ನು ಸಾರ್ವಜನಿಕ ವಿತರಣ ವ್ಯವಸ್ಥೆಯಡಿಯಲ್ಲಿ ಸರಬರಾಜು ಮಾಡಿದೆ ಎಂದು ಭಾರತೀಯ ಆಹಾರ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಿ.ವಿ. ಪ್ರಸಾದ್ ಹೇಳಿದ್ದಾರೆ.