Advertisement
ಪರಿಹಾರ ಬಿಡುಗಡೆ ಆಗಿರುವುದನ್ನು ಡಿಸಿ ಯಶವಂತ ಗುರುಕರ್ ಅಂಕಿ ಅಂಶಗಳೊಂದಿಗೆ ಕೇಂದ್ರ ಅಧ್ಯಯನ ತಂಡದ ಗಮನಕ್ಕೆ ತಂದರು. ಕಳೆದ ಆಗಸ್ಟ್ ತಿಂಗಳ ಮೊದಲ 10ದಿನದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಜಿಲ್ಲೆಯಲ್ಲಿ 1,11,400 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 805ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ಆರು ಜನರಿಗೆ ತೊಂದರೆಯಾಗಿದೆ. ಪ್ರಸ್ತುತ ಬೆಳೆ ಹಾನಿ ಪರಿಹಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಬುಧವಾರ 33,487 ರೈತರ ಖಾತೆಗೆ 30.79 ಕೋಟಿ ರೂ. ಮೊದಲನೇ ಕಂತಿನ ರೂಪದಲ್ಲಿ ಜಮೆ ಮಾಡಲಾಗಿದೆ ಎಂದು ಡಿಸಿ ವಿವರಣೆ ನೀಡಿದರು.
Related Articles
Advertisement
ನಂತರ ಇದೇ ಗ್ರಾಮದ ವಿನೋದ ಬಸನಾಳಕರ್ ಅವರ 10ಎಕರೆ ಪ್ರದೇಶದಲ್ಲಿ ಬೆಳೆದ ಹಾನಿಯಾದ ತೊಗರಿ ಬೆಳೆ ವೀಕ್ಷಿಸಲಾಯಿತು. ರೈತ ವಿನೋದ ಬಸನಾಳಕರ್ ಮಾತನಾಡಿ, ಶೇ.80ರಷ್ಟು ಬೆಳೆ ಹಾನಿಯಾಗಿದೆ. ಬೆಳೆ ವಿಮೆ ಪರಿಹಾರಕ್ಕೆ ದೂರು ನೀಡುವ ಕಾಲಾವಧಿ ವಿಸ್ತರಿಬೇಕು ಎಂದು ಮನವಿ ಮಾಡಿದರು.
ನಂತರ ತಂಡವು ಜೇವರ್ಗಿ ಪಟ್ಟಣದಲ್ಲಿ ಮಳೆಯಿಂದ ಭಾಗಶಃ ಹಾನಿಯಾದ ಮಲ್ಲಿಕಾರ್ಜುನ ಡೂಗನಕರ್, ಧರ್ಮಣ್ಣಾ, ಮರೆಮ್ಮ ಗಂಡ ಕಾಳಪ್ಪ ಅವರ ಮನೆ ವೀಕ್ಷಿಸಿತು. ಜೇವರ್ಗಿ ತಾಲೂಕಿನ ಪ್ರಭಾರಿ ತಹಶೀಲ್ದಾರ್ ಸಂಜೀವಕುಮಾರ ದಾಸರ್ ಅವರು ಜೇವರ್ಗಿ ಪಟ್ಟಣದಲ್ಲಿ ನಾಲ್ಕು ಸೇರಿ ತಾಲೂಕಿನಾದ್ಯಂತ 160ಮನೆ ಹಾನಿಗೊಳಗಾಗಿವೆ. ಭಾಗಶಃ ಹಾನಿಯಾದ ಮನೆಗಳಿಗೆ ತಕ್ಷಣ 10ಸಾವಿರ ರೂ. ತದನಂತರ 40 ಸಾವಿರ ರೂ. ಸೇರಿ ಒಟ್ಟು 50 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದರು.
ಕಲಬುರಗಿ ತಹಶೀಲ್ದಾರ್ ಪ್ರಕಾಶ ಕುದರಿ ಸೇರಿದಂತೆ ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳು ಇದ್ದರು. ನಂತರ ತಂಡವು ವಿಜಯಪುರ ಜಿಲ್ಲೆಗೆ ಪ್ರಯಾಣಿಸಿತು. ಇದಕ್ಕೂ ಮುನ್ನ ಕಲಬುರಗಿ ನಗರದ ಐವಾನ-ಎ-ಶಾಹಿ ಅತಿಥಿಗೃಹದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರದ ತಂಡವು, ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ, ಮನೆ, ಬೆಳೆ ಹಾನಿ, ಮಾನವ-ಪ್ರಾಣಿ ಹಾನಿ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಯಿತು.