Advertisement

ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ

09:28 AM Nov 09, 2021 | Team Udayavani |

ಕಲಬುರಗಿ: ನ.27ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.

Advertisement

ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಅವರು, ಸಮ್ಮೇಳನದ ಯಶಸ್ವಿಗೆ ಸರ್ಕಾರದ ಸರ್ವ ನಿಟ್ಟಿನ ಬೆಂಬಲವಿದೆ ಎಂದರು.

ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಲಬುರಗಿಯಲ್ಲಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದನ್ನು ನೆನಪಿಸಿಕೊಂಡ ಸಿಎಂ ಅವರು, ಕಲಬುರಗಿ ಪತ್ರಕರ್ತರು ಬಹಳ ಹೃದಯವಂತರು. ಜಿಲ್ಲೆಯ ಪತ್ರಕರ್ತರು ಅಂದಿನಿಂದ ಇಂದಿನವರೆಗೂ ತಮ್ಮೊಂದಿಗೆ ಹಾಗೆಯೇ ಇದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾತನಾಡಿ, 25 ವರ್ಷಗಳ ನಂತರ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿದೆ. ಹೀಗಾಗಿ ಸಮ್ಮೇಳನ ಮಾದರಿಯಂತೆ ನಡೆಸಲಾಗುವುದು ಎಂದರು.

Advertisement

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಮ್ಮೇಳನದ ಉದ್ಘಾಟನೆ ನೆರವೇರಿಸಿ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಕೋರಿದರು.

ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ, ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಬಂಗ್ಲೆ, ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ್‌, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಆವಂಟಿ, ನಿಕಟಪೂರ್ವ ಅಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೆ„ರಾಮಡಗಿ, ದೇವಿಂದ್ರಪ್ಪ ಕಪನೂರ, ಖಜಾಂಚಿ ರಾಜು ದೇಶಮುಖ ಸೇರಿದಂತೆ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next