Advertisement

ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೊಳಿಸಿ

06:57 PM Sep 20, 2020 | Suhan S |

ಶಿವಮೊಗ್ಗ: ಮಾರ್ಚ್‌ 23 ರಿಂದ ಇದುವರೆಗೂ ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆಯಾಗಿಲ್ಲ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡದಿದ್ದಲ್ಲಿ ಆಡಳಿತ ಪಕ್ಷದ ಶಾಸಕನಾಗಿ ಸದನದಲ್ಲಿ ಉನ್ನತ ಶಿಕ್ಷಣ ಸಚಿವರ ವಿರುದ್ಧ ಧ್ವನಿಯೆತ್ತಬೇಕಾಗುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಎಚ್ಚರಿಕೆ ನೀಡಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ವೇತನ ಸಿಗದೇ ಜೀವನ ನಿರ್ವಹಣೆ ಸಾಧ್ಯವಾಗದೆ ನಾಲ್ವರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದು ಅಲ್ಲದೇ ಅನಾರೋಗ್ಯಕ್ಕೆ ತುತ್ತಾಗಿ 18 ಉಪನ್ಯಾಸಕರು ಮೃತಪಟ್ಟಿದ್ದಾರೆ. ಇಂದು ಉನ್ನತ ಶಿಕ್ಷಣ ಕಲಿತವರು ಒಂದುಹೊತ್ತಿನ ಊಟಕ್ಕಾಗಿ ಪರಿತಪಿಸುವಂತಹ ಸಂದರ್ಭ ಬಂದಿದೆ ಎಂದರು.

ಕೇಂದ್ರ ಸರ್ಕಾರ ಜುಲೈವರೆಗೆ ವೇತನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದರೂ ಸಹ ರಾಜ್ಯ ಸರ್ಕಾರ ಇದನ್ನು ಪಾಲನೆ ಮಾಡಿಲ್ಲ. ವೇತನ ಸಿಗದೇ ಅತಿಥಿ ಉಪನ್ಯಾಸಕರು ಕೂಲಿ ಕೆಲಸ, ಹಣ್ಣುಹಂಪಲು ಮಾರಾಟ ಸೇರಿದಂತೆ ಇತರೆ ಕೆಲಸಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಇವರ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸಂಬಂಧಿ ಸಿದಂತೆಉನ್ನತ ಸಚಿವರನ್ನು ಕರೆಸಿ, ಚರ್ಚಿಸಿ ವೇತನ  ಬಿಡುಗಡೆ ಮಾಡುವಂತೆ ಸೂಚಿಸಬೇಕು. ಕೂಡಲೇ ಸರ್ಕಾರ ವೇತನ ಬಿಡುಗಡೆ ಮಾಡಬೇಕು, ಇಲ್ಲದಿದ್ದಲ್ಲಿ ಸದನದಲ್ಲಿ ಉಪನ್ಯಾಸಕರ ಪರ ಬಹಿರಂಗವಾಗಿ ನಿಲ್ಲುವುದಕ್ಕೆ ಹಿಂಜರಿಯುವುದಿಲ್ಲ ಎಂದರು

Advertisement

Udayavani is now on Telegram. Click here to join our channel and stay updated with the latest news.

Next