ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯವನ್ನು ಲಾಕ್ ಡೌನ್ ಮಾಡಬೇಕೋ ಬೇಡವೋ ಎಂಬುದರ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿರುವ ಹಿನ್ನಲೆಯಲ್ಲಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೋವಿಡ್ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಹೇಳಿದ್ದಾರೆ.
ಓದಿ : ಸರ್ಕಾರಿ ಕಚೇರಿಗಳಲ್ಲಿ ರೊಟೇಶನ್ ಪದ್ಧತಿ ಜಾರಿಗೊಳಿಸಿ: ಮಂಜುನಾಥ್
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೋನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ ನಿರ್ಬಂಧ ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೋನಾ ಎದುರಿಸಲು ಬಿಜೆಪಿ ಸರ್ಕಾರ ಏನು ಮಾಡಿದೆ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತ ಪತ್ರವನ್ನು ಹೊರಡಿಸಬೇಕು ಎಂದು ಬರೆದುಕೊಂಡಿದ್ದಾರೆ.
ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಕೋವಿಡ್ ಮೆಡಿಕಲ್ ಎಮೆರ್ಜನ್ಸಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲ ಜನಕದ ದಾಸ್ತಾನಿಲ್ಲ, ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಐಸಿಯು ನಲ್ಲಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇನ್ನು, ಒಂದು ವರ್ಷದ ಹಿಂದೆ ಮೊದಲ ಬಾರಿ ಕೋವಿಡ್ ದಾಳಿ ಇಟ್ಆಗ ಅದು ಅನೀರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೋವಿಡ್ ಎದುರಿಸಲು ತನ್ನನ್ನು ತಾನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೋವಿಡನ್ನು ತನ್ನ ಭ್ರಷ್ಟತೆಗೆ ಬಳಸಿಕೊಂಡ ಬಿಜೆಪಿ ಸರ್ಕಾರ ಈಗ ಕೈಚೆಲ್ಲಿ ಕೂತಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಓದಿ : ಸಖತ್ತಾಗಿದೆ ಫ್ಯಾಶನ್ ಪ್ರಿಯೆ ನೋರಾ ಫೇತೆಹಿ ನ್ಯೂ ಲುಕ್