Advertisement

ಮೇ 1 ರಿಂದ  ರಿಲಯನ್ಸ್ ಉದ್ಯೋಗಿಗಳಿಗೆ, ಕುಟುಂಬದವರಿಗೆ ಉಚಿತ ಕೋವಿಡ್ ಲಸಿಕೆ

03:23 PM Apr 28, 2021 | |

ನವ ದೆಹಲಿ : ಕೋವಿಡ್ ಬಿಕ್ಕಟ್ಟಿನ  ಎರಡನೇ ಅಲೆ ದೇಶದಲ್ಲಿ ತೀವ್ರವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು,  ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೊರೋನಾ ಖರೀದಿಸಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ.

Advertisement

ಈ ನಡುವೆ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ದೇಶದ ಎಲ್ಲಾ ಭಾಗಗಳಲ್ಲಿರುವ ತನ್ನ ಉದ್ಯೋಗಿಗಳಿಗೆ ಮತ್ತು ಉದ್ಯೋಗಿಗಳ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರಿಗೆ  ಮೇ 1 ರಿಂದ ಕೋವಿಡ್ ಲಸಿಕೆಯನ್ನು ನೀಡುವ  ಆರ್-ಸುರಕ್ಷಾ ಅಭಿಯಾನವನ್ನು ಕೈಗೊಂಡಿದೆ.

ಓದಿ : ಕೋವಿಡ್ ಹಿನ್ನೆಲೆ : 3 ದಿನ ಲಾಕ್ ಡೌನ್ ಘೋಷಿಸಿದ ಗೋವಾ ಸರ್ಕಾರ

ಈ ಬಗ್ಗೆ ಪ್ರತಿಕ್ರಿಯಿಸಿದ ರಿಲಯನ್ಸ್ ಕಂಪೆನಿ, ಕೋವಿಡ್ ಸೋಂಕಿನಿಂದ ನಮ್ಮ ಉದ್ಯೋಗಿಗಳನ್ನು ರಕ್ಷಿಸುವುದು ನಮ್ಮ ಉದ್ದೆಶವಾಗಿದೆ. ಈ ಮೂಲಕ ಸಂಸ್ಥೆಯ ಪ್ರತಿಯೊಬ್ಬ ಉದ್ಯೋಗಿಯೂ ಮತ್ತು ಅವರ ಕುಟುಂಬದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ಕೋವಿಡ್ ಸೋಂಕಿನಿಂದ ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದೆ.

ಇನ್ನು, ಕೋವಿಡ್ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೋವಿಡ್ ಲಸಿಕೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿಸಿದೆ.

Advertisement

ಓದಿ : ಪ್ರವಾಸಿಗರಿಗೆ ನಿರಾಸೆ: ಏ.29ರಿಂದ ಗೋವಾದಲ್ಲಿ ಲಾಕ್ ಡೌನ್ ಜಾರಿ: ಸಿಎಂ ಸಾವಂತ್

Advertisement

Udayavani is now on Telegram. Click here to join our channel and stay updated with the latest news.

Next